May 15, 2024

MALNAD TV

HEART OF COFFEE CITY

ನರೇಗಾ ಯೋಜನೆ: 19 ಲಕ್ಷ ಮಾನವ ದಿನದ ಗುರಿ ಮೀರಿ ಸಾಧನೆ_ಜಿ.ಪ್ರಭು

1 min read

ಚಿಕ್ಕಮಗಳೂರು: ನರೇಗಾ ಯೋಜನೆಯಲ್ಲಿ ಜಿಲ್ಲೆಗೆ ಈ ವರ್ಷ 19 ಲಕ್ಷ ಮಾನವ ದಿನಗಳ ಗುರಿಯನ್ನು ನೀಡಲಾಗಿದ್ದು, ಹೆಚ್ಚುವರಿಯಾಗಿ 21 ಲಕ್ಷ ಮಾನವ ದಿನಗಳ ಗುರಿಯನ್ನು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನರೇಗಾದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ವಿವಿಧ ಅನುದಾನಗಳಲ್ಲಿ 3 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ತಗೆದುಕೊಳ್ಳಲು ಅವಕಾಶ ಇದೆ ಎಂದು ತಿಳಿಸಿದ ಅವರು ಜಲಸಂರಕ್ಷಣಾ ಅಭಿಯಾನದ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಕೃಷಿ ಹೊಂಡ, ಬದುಗಳ ನಿರ್ಮಾಣ ಮಾಡಿ ನೀರು ಇಂಗಿಗಿಸುವುದು, ಕಲ್ಯಾಣಿಗಳ ಅಭಿವೃದ್ಧಿ ಕೆರೆ, ಗೋಕಟ್ಟೆ ಮಳೆ ನೀರು ಕೊಯ್ಲು ಘಟಕ ಹಾಗೂ ಕೃಷಿ ಬಾವಿಗಳು ಸೇರಿದಂತೆ 24 ಕೋಟಿ 10451 ಕಾಮಗಾರಿಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಇನ್ನು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿನಲ್ಲಿ ತಿಂಗಳಿಗೆ 10 ಕೆರೆಗಳನ್ನು ಅಭಿವೃದ್ಧಿ ಮಾಡುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ನಗರದ ಪ್ರದೇಶದಲ್ಲಿ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡುವ ಹಾಗೆ ಗ್ರಾಮೀಣ ಪ್ರದೇಶದಲ್ಲಿಯೂ ಸಹ ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ 8 ಸಾವಿರ ಹಳ್ಳಿಗಳಲ್ಲಿ 25 ಸಾವಿರ ಇಂಗುಗುಂಡಿಗಳನ್ನು ನಿರ್ಮಾಣ ಮಾಡುವ ಮೂಲಕ ಸ್ವಚ್ಚತೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!