May 14, 2024

MALNAD TV

HEART OF COFFEE CITY

Exclusive… ಕೇರಳದ ಕಣ್ಣೂರಿನಲ್ಲಿ ನಕ್ಸಲ್ ಅಂಗಡಿ ಸುರೇಶ್ ಬಂಧನ

1 min read

Exclusive… ಚಿಕ್ಕಮಗಳೂರು: 20 ವರ್ಷಗಳಿಂದ ಕಣ್ಮರೆಯಾಗಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ನನ್ನು ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ, ಕಾಡಾನೆ ದಾಳಿಗೆ ಒಳಗಾಗಿ ಗಾಯಗೊಂಡ ವೇಳೆ ಸುರೇಶ್ ನನ್ನು ಚಿಕಿತ್ಸೆ ಕೊಡಿಸಿ ಬಂಧಿಸಿದ್ದಾರೆ.

ಮಲೆನಾಡಿನ ನಕ್ಸಲ್ ಚಳುವಳಿಯ ಪ್ರಮುಖರಲ್ಲಿ ಒಬ್ಬನಾಗಿದ್ದ ಎ.ಎಸ್ ಸುರೇಶ್ ಅಲಿಯಾಸ್ ಮಹದೇವ ಕೇರಳದ ಕಣ್ಣೂರಿನ ದಟ್ಟ ಅರಣ್ಯದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಕಾಡಾನೆ ದಾಳಿ ಮಾಡಿದ ವೇಳೆ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಎ.ಎಸ್ ಸುರೇಶ್ ನಿಗೆ ಮೊದಲು ಚಿಕಿತ್ಸೆ ಕೊಡಿಸಿದ ಅಲ್ಲಿನ ಪೊಲೀಸರು ನಂತರ ವಿಳಾಸ ವಿಚಾರಣೆ ವೇಳೆ ಈತನನ್ನು ನಕ್ಸಲ್ ಎಂದು ಗುರುತಿಸಿದ್ದಾರೆ. ಮೂಲತಃ ಮೂಡಿಗೆರೆ ತಾಲೂಕಿನ ಗೋಣಿಬೀಡಿ ಸಮೀಪದ ಅಂಗಡಿ ಎಂಬ ಗ್ರಾಮದ ಎ.ಎಸ್ ಸುರೇಶ್ ಕಳೆದ. ಇಪ್ಪತ್ತು ವರ್ಷಗಳಿಂದ ಕಣ್ಮರೆಯಾಗಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿದ್ದ, ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ನಕ್ಸಲೀಯ ಕೃತ್ಯ ಪ್ರಕರಣಗಳಲ್ಲಿ ಈತನು ಬೇಕಾಗಿದ್ದ. ಸರ್ಕಾರ ಇವನನ್ನು ಹಿಡಿದು ಕೊಟ್ಟವರಿಗೆ 5 ಲಕ್ಷ ಬಹುಮಾನ ಸಹಾ ಘೋಷಿಸಿತ್ತು, ಕೇರಳದ ಕಾನನದಲ್ಲಿ ಒಡಾಡಿಕೊಂಡಿದ್ದ ಇವನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ಸುರೇಶ್ ಅಲಿಯಾಸ್ ಮಹದೇವನನ್ನು ಚಿಕಿತ್ಸೆ ಕೊಡಿಸಿ ನಂತರ ಇವನ ಬಗ್ಗೆ ವಿಚಾರಣೆ ನಡೆದ ವೇಳೆ ಈತ ನಕ್ಸಲ್ ಎಂಬುದು ಗೊತ್ತಾಗಿದೆ. ಸದ್ಯ ಕೇರಳ ಪೊಲೀಸರ ವಶದಲ್ಲಿರುವ ಸುರೇಶ್ ನನ್ನು ಚಿಕ್ಕಮಗಳೂರಿಗೆ ಕರೆತರಲಿದ್ದಾರೆ. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!