May 12, 2024

MALNAD TV

HEART OF COFFEE CITY

ನಿಗಧಿತ ಶುಲ್ಕ ಪಡೆಯಲು ಸೂಚನೆ

1 min read
ನಿಗಧಿತ ಶುಲ್ಕ ಪಡೆಯಲು ಸೂಚನೆ

ನಿಗಧಿತ ಶುಲ್ಕ ಪಡೆಯಲು ಸೂಚನೆ

ನಿಗಧಿತ ಶುಲ್ಕ ಪಡೆಯಲು ಸೂಚನೆ
ಚಿಕ್ಕಮಗಳೂರು.ಫೆ.೨೦: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ  ೨೦೨೦-೨೧ ನೇ ಸಾಲಿನ ಖಾಸಗಿ ಅನುದಾನ ರಹಿತ ಶಾಲೆಗಳು ಕೋವಿಡ್-೧೯ ಹಿನ್ನೆಲೆಯಲ್ಲಿ ಶಾಲಾ ಶುಲ್ಕಗಳನ್ನು ಹಿಂದಿನ ವರ್ಷದ ಶಾಲಾ ಶುಲ್ಕಕ್ಕಿಂತ ಹೆಚ್ಚಿಗೆ ಪಡೆಯದೇ, ಈ ಸಾಲಿನಲ್ಲಿ ಬೋಧನಾ ಶುಲ್ಕವನ್ನು ಶೇ.೭೦ ರಷ್ಟು ಪಡೆಯುವಂತೆ ಸರ್ಕಾರ ಆದೇಶಿಸಿದೆ.
ಆಡಳಿತ ಮಂಡಳಿಗಳು ಮತ್ತು ಪೋಷಕರು ಶುಲ್ಕವನ್ನು ಪಡೆಯುವ ಅಥವಾ ಪಾವತಿಸುವ ಕುರಿತಂತೆ ಯಾವುದೇ ತರಕಾರುಗಳಿದ್ದಲ್ಲಿ ಅಂತಹ ಸಮಸ್ಯೆಗಳನ್ನು ಪರಿಹರಿಸಲು ಸಮಿತಿಗಳನ್ನು ರಚಿಸಲಾಗಿದ್ದು, ಅಂತಹ ತಕರಾರು ಅರ್ಜಿಗಳನ್ನು ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಥವಾ ಜಿಲ್ಲಾ ಉಪನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!