May 19, 2024

MALNAD TV

HEART OF COFFEE CITY

ನರ್ಸಿಂಗ್ ವಿದ್ಯಾರ್ಥಿಗಳಿಗೆ ಬಂದಿಲ್ಲ ಸ್ಕಾಲರ್ ಶಿಪ್ ಬಡ ವಿದ್ಯಾರ್ಥಿಗಳಿಗೆ ಸ್ಪಂದಿಸುತ್ತಿಲ್ಲ ಸಮಾಜ ಕಲ್ಯಾಣ ಇಲಾಖೆ

1 min read

ನರ್ಸಿಂಗ್ ಕಾಲೇಜಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ರು ಎರಡು ವರ್ಷದಿಂದ ವಿದ್ಯಾರ್ಥಿ ವೇತನ ಬರದೆ ಬಡ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿರೋ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ನೈಟಿಂಗೆಲ್ ನರ್ಸಿಂಗ್ ಕಾಲೇಜಿನಲ್ಲಿ ನರ್ಸಿಂಗ್ ಶಿಕ್ಷಣ ಪಡೆಯುತ್ತಿರೋ ವಿದ್ಯಾರ್ಥಿಗಳು ಕಳೆದ ಎರಡು ವರ್ಷದಿಂದ ಸ್ಕಾಲರ್ ಶಿಪ್ ವಂಚಿತರಾಗಿದ್ದಾರೆ. ಸ್ಕಾಲರ್ ಶಿಪ್ ಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಲೆದು ಅಲೆದು ವಿದ್ಯಾರ್ಥಿಗಳು ಸುಸ್ತಾಗಿ ಹೋಗಿದ್ದಾರೆ.

೨೦೧೯-೨೦, ೨೦೨೦_೨೧ರ ಅವಧಿಯಲ್ಲಿ ಅರ್ಜಿ ಸಲ್ಲಿಸಲಾಗಿದ್ದು ಈ ವರೆಗೂ ವೇತನ ನೀಡಿಲ್ಲ ಇದರಿಂದ ವಿದ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆಯಾಗಿದ್ದು ಕೂಡಲೇ ವಿದ್ಯಾರ್ಥಿ ವೇತನ ನೀಡುವಂತೆ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನು ನಮ್ಮ ಮನೆಯಲ್ಲಿ ಬಡತನ ಹಾಗೂ ಕೋವಿಡ್ ಸಂದರ್ಭದಲ್ಲಿ ಜೀವನ ನಡೆಸುವುದು ಪೋಷಕರಿಗೆ ಕಷ್ಟಕರವಾಗಿದೆ. ವಿದ್ಯಾರ್ಥಿ ವೇತನವನ್ನು ನೆಚ್ಚಿಕೊಂಡು ನಾವು ಶಿಕ್ಷಣ ಪಡೆಯಲು ಬಂದಿದ್ದು ಈಗ ಕಳೆದ ಎರಡು ವರ್ಷದಿಂದ ಅರ್ಜಿ ಸಲ್ಲಿಸಿದದರು ವಿದ್ಯಾರ್ಥಿ ವೇತನ ಬರದಿರುವುದರಿಂದ ಸಾಕಷ್ಟು ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ಆಳಲನ್ನ ತೋಡಿಕೊಂಡಿದ್ದಾರೆ. ಈ ಕುರಿತು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕಳೆದ ಎರಡು ವರ್ಷದಿಂದ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ನೀಡಬೇಕಾಗಿದ್ದ ವಿದ್ಯಾರ್ಥಿ ವೇತನ ಬಂದಿಲ್ಲ. ೨೦೧೯-೨೦, ೨೦೨೦_೨೧ರ ಅವಧಿಯಲ್ಲಿ ಅರ್ಜಿ ಸಲ್ಲಿಸಲಾಗಿದ್ದು ಈ ವರೆಗೂ ವೇತನ ನೀಡಿಲ್ಲ ಇದರಿಂದ ವಿದ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆಯಾಗಿದ್ದು ಕೂಡಲೇ ವಿದ್ಯಾರ್ಥಿ ವೇತನ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

 

ಮನೆಯಲ್ಲಿ ಬಡತನ ಹಾಗೂ ಕೋವಿಡ್ ಸಂದರ್ಭದಲ್ಲಿ ಜೀವನ ನಡೆಸುವುದು ಪೋಷಕರಿಗೆ ಕಷ್ಟಕರವಾಗಿದೆ. ವಿದ್ಯಾರ್ಥಿ ವೇತನವನ್ನು ನೆಚ್ಚಿಕೊಂಡು ನಾವು ಶಿಕ್ಷಣ ಪಡೆಯಲು ಬಂದಿದ್ದು ಈಗ ಕಳೆದ ಎರಡು ವರ್ಷದಿಂದ ಅರ್ಜಿ ಸಲ್ಲಿಸಿದದರು ವಿದ್ಯಾರ್ಥಿ ವೇತನ ಬರದಿರುವುದರಿಂದ ಸಾಕಷ್ಟು ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!