May 9, 2024

MALNAD TV

HEART OF COFFEE CITY

ರಸ್ತೆ ಅಗೆದು ಅರ್ಧಕ್ಕೆ ಬಿಟ್ಟು ಬಂದ ಅಧಿಕಾರಿಗಳು, ಓಡಾಡೋದಕ್ಕೆ ಆಗ್ತಿಲ್ಲ, ಇಂಜಿನಿಯರ್ ಕಚೇರಿ ಎದುರು ಹಳ್ಳಿಗರ ಆಕ್ರೋಶ

1 min read

 

ಚಿಕ್ಕಮಗಳೂರು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ರಸ್ತೆ ಕಾಮಗಾರಿಗೆ ತೀವ್ರ ನಿರ್ಲಕ್ಷ್ಯ ತೋರಿದ್ದಾರೆ. ಜನಸಾಮಾನ್ಯರು ಓಡಾಡುವುದೇ ಕಷ್ಟವಾಗಿದೆ ಎಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮ ಪಂಚಾಯಿತಿಯ ಮಡ್ಡಿಕೆರೆ ಗ್ರಾಮಸ್ಥರು ಮೂಡಿಗೆರೆಯ ಜಿಲ್ಲಾ ಪಂಚಾಯಿತಿಯ ಇಂಜಿನಿಯರ್ ಉಪವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಮೂಡಿಗೆರೆ ತಾಲೂಕಿನ ಮಡ್ಡಿಕೆರೆ ಗ್ರಾಮದ ಮಹಿಳೆಯರು ಸೇರಿದಂತೆ 100ಕ್ಕೂ ಹೆಚ್ಚು ಜನ ಜಿಲ್ಲಾ ಪಂಚಾಯಿತಿಯ ಇಂಜಿನಿಯರ್ ಕಛೇರಿ ಆವರಣದಲ್ಲಿ ಶಾಮಿಯಾನ ಹಾಕಿ ಧರಣಿ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕೆಲ ಕಾಲ ಬಿಗುವಿನ ವಾತಾವರಣ ಕೂಡ ನಿರ್ಮಾಣವಾಗಿತ್ತು. ರಸ್ತೆ ಕಾಮಗಾರಿ ಪ್ರಾರಂಭಿಸುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತ ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮಡ್ಡಿಕೆರೆ ಗ್ರಾಮಕ್ಕೆ ತೆರಳುವ ರಸ್ತೆಯ ಡಾಂಬಾರೀಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆಯಡಿ ಅನುದಾನ ಮಂಜೂರಾಗಿದ್ದು. ಕಾಮಗಾರಿಗೆ ಟೆಂಡರ್ ಕೂಡ ಆಗಿದೆ. ಕಳೆದ ಡಿಸೆಂಬರ್ 10ರಂದೇ ಕಾಮಗಾರಿ ಪ್ರಾರಂಭಿಸಲಾಗಿತ್ತು. ರಸ್ತೆಯನ್ನು ಅಗೆದು ಅರ್ಧಕ್ಕೆ ಕೆಲಸ ನಿಲ್ಲಿಸಿದ್ದಾರೆ. ಇದರಿಂದ ಗ್ರಾಮಸ್ಥರು ರಸ್ತೆಯಲ್ಲಿ ವಾಹನ ಚಲಾಯಿಸಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಖಾಸಗಿ ವ್ಯಕ್ತಿಯೊಬ್ಬರಿಗೆ ಹೆದರಿ ಕೆಲಸ ಮಾಡಲು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೆ ಯಾವುದೇ ಪ್ರಯೋಜನವಾಗುತ್ತಿಲ್ಲ.

ಹಾಗಾಗಿ ಕೂಡಲೇ ರಸ್ತೆ ಕಾಮಗಾರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಕ್ರೋಶಿತರಾತ ಜನ ಜಿಲ್ಲಾ ಪಂಚಾಯಿತಿಯ ಇಂಜಿನಿಯರ್ ಕಛೇರಿಗೆ ಬೀಗ ಜಡಿಯಲು ಪ್ರಯತ್ನಿಸಿದರು. ಪೆÇಲೀಸರು ಮಧ್ಯಪ್ರವೇಶಿಸಿ ಕಛೇರಿ ಬಂದ್ ಮಾಡದಂತೆ ತಡೆದರು. ಸ್ಥಳದಲ್ಲಿ ಮೊಕ್ಕಾ ಹೂಡಿದ್ದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಪ್ರತಿಭಟನಾಕಾರರು ಮೂಡಿಗೆರೆ ಜಿ.ಪಂ. ಇಂಜಿನಿಯರ್ ವಿಭಾಗದ ಎಇಇ ಮತ್ತು ಜೆಇ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬಾರದ ಕಾರಣ ಚಿಕ್ಕಮಗಳೂರು ಜಿ.ಪಂ. ಎಕ್ಸಿಕ್ಯೂಟೀವ್ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಆಗ್ರಹಿಸಿದರು. ಗ್ರಾಮಸ್ಥರ ಒತ್ತಾಯದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಇಂಜಿನಿಯರ್ ಶೀಘ್ರವೇ ಕೆಲಸ ಆರಂಭಿಸುವ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನ ಕೈಬಿಟ್ಟಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!