April 29, 2024

MALNAD TV

HEART OF COFFEE CITY

ವಸತಿ ಶಾಲೆಯಲ್ಲಿ ಮಕ್ಕಳನ್ನ ಓದಿಸುವ ಪೋಷಕರೇ ಎಚ್ಚರ…ಎಚ್ಚರ…

1 min read

ಚಿಕ್ಕಮಗಳೂರು: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಕೆಲಸದ ಪರೀಕ್ಷೆ ಬರೆಯಲು ಅವಕಾಶ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧ ನೀಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಘಟನೆ ಸಂಬಂಧ ವಸತಿ ಶಾಲೆಯ ಡಿ ದರ್ಜೆ ನೌಕರ, ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾ ಮಹಿಳಾ ಅಧಿಕಾರಿ ಹಾಗೂ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮಹಿಳಾ ಅಧಿಕಾರಿಯ ಪ್ರಿಯಕರನನ್ನು ಕಡೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ದೇಸಾಯಿ ವಸತಿ ಶಾಲೆಯ ಡಿ ದರ್ಜೆ ನೌಕರ ಸುರೇಶ್ ಎಂಬಾತ ಶಾಲೆಯ ವಿದ್ಯಾರ್ಥಿಯರಿಗೆ ಪ್ಯಾರಾ ಮೆಡಿಕಲ್ ಕೋರ್ಸ್‌ನ ಪರೀಕ್ಷೆ ಬರೆಯಲು ಅವಕಾಶ ಕೊಡಿಸುತ್ತೇನೆ, ಪರೀಕ್ಷೆಯಲ್ಲಿ ಪಾಸಾದಲ್ಲಿ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿಯರ ಪೋಷಕರನ್ನೂ ನಂಬಿಸಿ ವಿದ್ಯಾರ್ಥಿನಿಯರನ್ನು ಗ್ರಾಮದಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಚಂದನಾ ಬಳಿ ಬಿಡುತ್ತಿದ್ದ ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನು ಪುಸಲಾಯಿಸಿ ರಾತ್ರಿ ವೇಳೆ ಅಲ್ಲೇ ಉಳಿಸಿಕೊಂಡು ರಾತ್ರಿ ವೇಳೆ ಕಾಫಿ, ಟೀ ನಲ್ಲಿ ಮತ್ತು ಬರುವ ಔಷಧ ಮಿಶ್ರಣ ಮಾಡಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಈ ವೇಳೆ ಅರೆಪ್ರಜ್ಞಾ ಸ್ಥಿತಿಯಲ್ಲಿರುವ ವಿದ್ಯಾರ್ಥಿನಿಯ ಮೇಲೆ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಚಂದನಾಳ ಪ್ರಿಯಕರ ವಿನಯ್‌ಕುಮಾರ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಆರೋಪಿಸಲಾಗಿದೆ.

ಆರೋಪಿಗಳು ವಸತಿ ಶಾಲೆಯ ಹಲವು ವಿದ್ಯಾರ್ಥಿನಿಯರನ್ನು ಈ ಕೃತ್ಯಕ್ಕೆ ಬಳಸಿಕೊಂಡಿದ್ದು, ಪರೀಕ್ಷೆ ಬರೆಯಲು ಒಪ್ಪಿಕೊಂಡ ವಿದ್ಯಾರ್ಥಿನಿಯರ ಪೋಷಕರ ಬಳಿ ಡಿ ದರ್ಜೆ ನೌಕರ ಸುರೇಶ್ ಸಂಪರ್ಕ ಸಾಧಿಸಿ, ಪರೀಕ್ಷೆ ಬರೆಯಲು ಪೋಷಕರಿಂದ ಅನುಮತಿ ಪಡೆಯುತ್ತಿದ್ದ. ಇದರಿಂದಾಗಿ ಆರೋಪಿಗಳ ಕೃತ್ಯದ ಬಗ್ಗೆ ಯಾರಿಗೂ ಅನುಮಾನ ಬರುತ್ತಿರಲಿಲ್ಲ. ಪರೀಕ್ಷೆಯ ನೆಪದಲ್ಲಿ ಪ್ರತೀ ಬಾರಿ ಒಬ್ಬೊಬ್ಬರನ್ನೇ ಚಂದನಾ ಬಳಿ ಬಿಡುತ್ತಿದ್ದ ತಮ್ಮ ಮೇಲಾದ ಲೈಂಗಿಕ ದೌರ್ಜನ್ಯ ಕೃತ್ಯದ ಬಗ್ಗೆ ವಿದ್ಯಾರ್ಥಿನಿಯರು ಭೀತಿಯಿಂದ ಯಾರಲ್ಲೂ ಹೇಳಿಕೊಂಡಿಲ್ಲ, ಕಳೆದ 2-3 ತಿಂಗಳಿನಿಂದ ಈ ಕೃತ್ಯ ನಡೆಯುತ್ತಿದೆ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!