May 19, 2024

MALNAD TV

HEART OF COFFEE CITY

ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಜನರು ನಗರಸಭೆಗೆ ಸಹಕರಿಸಬೇಕು – ವರಸಿದ್ಧಿ ವೇಣುಗೋಪಾಲ್

1 min read

 

ಚಿಕ್ಕಮಗಳೂರು-ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಿರ್ಧಾರ ಮಾಡಿದ್ದು ಕಳೆದ ಒಂದೂವರೆ ವರ್ಷದಿಂದ ಪ್ಲಾಸ್ಟಿಕ್ ಬಳಕೆ ಮಾಡದಂತೆ ತಿಳುವಳಿಕೆ ಕೊಡುವ ಕಾರ್ಯಕ್ರಮವನ್ನು ನಿರಂತರವಾಗಿ ಮಾಡುತ್ತಿದ್ದೇವೆ ಎಂದು ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದರು.ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಗರಸಭೆ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.ಸಾರ್ವಜನಿಕರು ಹಾಗೂ ಪ್ರವಾಸಿಗರು ಪ್ಲಾಸ್ಟಿಕ್‌ನಿಂದಾಗಿ ಜಿಲ್ಲೆಯ ಪ್ರವಾಸಿ ತಾಣಗಳು ಕಲುಷಿತಗೊಳಿಸುತ್ತಿದ್ದು ಪರಿಸರವನ್ನು ಸ್ವಚ್ಚವಾಗಿಡಬೇಕೆಂಬ ಸದುದ್ದೇಶದಿಂದ ಡಿಸಿ, ನಗರಸಭೆ ಸಿಬ್ಬಂದಿ ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಹಾಳಾಗುತ್ತಿದ್ದು ಇದು ಮುಂದಿನ ಪೀಳಿಗೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಹಿಂದೆ ಸಂತೆಗೆ, ಪ್ರಾವಿಜನ್ ಸ್ಟೋರ್‌ಗೆ ಹೋಗುವಾಗ ಕೈಚೀಲ ತೆಗೆದುಕೊಂಡು ಹೋಗುತ್ತಿದ್ದ ಪದ್ದತಿಯನ್ನು ಸಾರ್ವಜನಿಕರು ಅನುಸರಿಸಬೇಕೆಂದು ವಿನಂತಿಸಿದರು.ಒಂದು ಬಾರಿ ಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನ್ನು ನಿಷೇಧಿಸಿದ್ದು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಅದಕ್ಕಾಗಿ ಅರಿವು ಮೂಡಿಸುವ ಕಾರ್ಯಕ್ರಮ ಜನ ಹೆಚ್ಚು ಸೇರುವ ಸಂತೆ, ಬಸ್ ನಿಲ್ದಾಣಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮನವಿ ಮಾಡಿದರು.
ಪೌರಾಯುಕ್ತ ಬಸವರಾಜ್ ಮಾತನಾಡಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂಬ ದೃಷ್ಠಿಯಿಂದ ಜು. 1 ರಿಂದ 27 ರವರೆಗೆ ನಿರಂತರವಾಗಿ ಜಾಗೃತಿ-ಅರಿವು ಮೂಡಿಸುವ ಕಾರ್ಯಕ್ರಮ ನಡೆಯುತ್ತಿದೆ ಎಂದು ತಿಳಿಸಿದರು.

 

ಅನೇಕ ಬಾರಿ ಸೂಚನೆ ನೀಡಿ ಎಚ್ಚರಿಸಿದ್ದರೂ ವರ್ತಕರು ಪ್ಲಾಸ್ಟಿಕ್ ಮಾರಾಟವನ್ನು ನಿಲ್ಲಿಸಿರಲಿಲ್ಲ ದಾಳಿ ಮಾಡಿ ತಪಾಸಣೆ ನಡೆಸಿದಾಗ ಸುಮಾರು 12 ರಿಂದ 15 ಕೆ.ಜಿ ಪ್ಲಾಸ್ಟಿಕ್ ಪತ್ತೆಯಾಗಿದೆ. ಕೆಎಸ್‌ಆರ್‌ಟಿಸಿ ಜಿಲ್ಲಾ ಅಧಿಕಾರಿಗಳು ಈ ವರ್ತಕರಿಗೆ ಸೂಚನೆ ನೀಡಬೇಕು, ಮುಂದೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವುದು ಕಂಡುಬAದರೆ ಅಂಗಡಿ ಪರವಾನಗಿ ರದ್ದುಪಡಿಸಿ, ಅಂಗಡಿಯನ್ನು ಬಂದ್ ಮಾಡಿಸಲಾಗುವುದೆಂದು ಎಚ್ಚರಿಸಿದರು.
ಪ್ಲಾಸ್ಟಿಕ್ ಬಳಸುವ ಸಾರ್ವಜನಿಕರು, ವರ್ತಕರು ಪ್ಲಾಸ್ಟಿಕ್ ಮಾರಾಟ ಮಾಡುವುದನ್ನು ಕೈಬಿಟ್ಟು ಪ್ಲಾಸ್ಟಿಕ್ ನಿರ್ಮೂಲನೆಗೆ ನಗರಸಭೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದ ಅವರು ಪ್ಲಾಸ್ಟಿಕ್ ತಯಾರಿಕಾ ಘಟಕಗಳು ಈ ಬಗ್ಗೆ ಎಚ್ಚರ ವಹಿಸಬೇಕು. ಇಲ್ಲವಾದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಹೇಳಿದರು.
ಬೇಲೂರಿನ ಶಿವಣ್ಣ ಮತ್ತು ಅವರ ತಂಡ ಪ್ಲಾಸ್ಟಿಕ್ ಬಳಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉತ್ತಮ ನಾಟಕ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆಂದು ಶ್ಲಾಘಿಸಿದರು.ಇದೇ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಜಿಲ್ಲಾ ಅಧಿಕಾರಿ ಬಸವರಾಜ್.ಹಿರಿಯ ಆರೋಗ್ಯ ನಿರೀಕ್ಷಕರು ಗಳಾದ ಈಶ್ವರ್, ನಾಗಪ್ಪ, ರಂಗಪ್ಪ, ಕಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್ ಹಾಗೂ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!