May 11, 2024

MALNAD TV

HEART OF COFFEE CITY

ವ್ಯಕ್ತಿ ವಶ, ಹಲವು ಅನುಮಾನ

1 min read

 

ಚಿಕ್ಕಮಗಳೂರು : ನಗರದ ಹೊರವಲಯದಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಕಳೆದ ಭಾನುವಾರ ವಶಕ್ಕೆ ಪಡೆದು ಕರೆದೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ನಗರ ಸಮೀಪದ ಚಿಕ್ಕಮಗಳೂರು-ತರೀಕೆರೆ ರಸ್ತೆಯಲ್ಲಿರುವ ಖಾಸಗಿ ಹೋಮ್ ಸ್ಟೇನಲ್ಲಿ ತಂಗಿದ್ದ ಬೆಂಗಳೂರು ಮೂಲಕ ಸೈಯದ್ ಖಾಲಿದ್ ಮುಹಮ್ಮದ್ ಎಂಬಾತನನ್ನು ಕಳೆದ ಭಾನುವಾರ ಬೆಂಗಳೂರಿನಿಂದ ಬಂದಿದ್ದ ಸುಮಾರು 9 ಮಂದಿ ಇದ್ದ ಸಿಸಿಬಿ ಪೊಲೀಸರ ತಂಡ ವಶಕ್ಕೆ ಪಡೆದಿದ್ದು, ಈ ತಂಡ ಹೋಮ್‍ಸ್ಟೇನ ಲೆಡ್ಜರ್ ಬುಕ್ ಸೇರಿದಂತೆ ಕೆಲ ಉಪಕರಣಗಳನ್ನೂ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸ್ಪೋಟಕ್ಕೆ ಸಂಚು ರೂಪಿಸಿದ್ದ ಉಗ್ರರ ಬಂಧನ ಪ್ರಕರಣದ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಸೈಯದ್ ಖಾಲಿದ್ ಮುಹಮ್ಮದ್ ಬಂಧನ ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಡಕಾಯಿತಿ ಪ್ರಕರಣವೊಂದರಲ್ಲಿ ಬೇಕಾಗಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಬೆಂಗಳೂರಿನ ಉಗ್ರರ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಈ ಸಂಬಂಧ ಕೆಲವರು ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!