May 6, 2024

MALNAD TV

HEART OF COFFEE CITY

ಪೊಲೀಸ್ ಹುತಾತ್ಮರ ದಿನಾಚರಣೆ

1 min read

ಚಿಕ್ಕಮಗಳೂರು: ಸಮಾಜದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವಾಗ ಪ್ರಾಣತ್ಯಾಗ ಮಾಡಿರುವ ವೀರ ಪೊಲೀಸರನ್ನು ನೆನೆಯುವ ಉದ್ದೇಶದಿಂದ ಪ್ರತಿವರ್ಷ ಅ.೨೧ ನ್ನು ದೇಶಾದ್ಯಂತ ಪೊಲೀಸ್ ಹುತಾತ್ಮರ ದಿನವನ್ನು ಆಚರಿಸುವ ಮೂಲಕ ಅವರಿಗೆ ಗೌರವ ಸಮರ್ಪಣೆ ಮಾಡಲಾಗುತ್ತಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಪುಷ್ಪಾಂಜಲಿ ಹೇಳಿದರು.
ನಗರದ ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಸಶಸ್ತç ಮೀಸಲು ಪಡೆಯ ಹುತಾತ್ಮರ ಸ್ಮಾರಕದ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಪೊಲೀಸ್ ಸಿಬ್ಬಂದಿಗಳು ನಿಷ್ಠೆಯಿಂದ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದು, ಈ ರೀತಿ ಸೇವೆ ಸಲ್ಲಿಸುವಾಗ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಪೇದೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಅ.೨೧ ರಂದು ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತ ಬರಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿನಿತ್ಯ ಹಗಲು-ಇರುಳನ್ನು ಲೆಕ್ಕಿಸದೆ ಲಕ್ಷಾಂತರ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸರೊಂದಿಗೆ ಸಹಾಯ ಹಸ್ತ ನೀಡಿದಾಗ ಮಾತ್ರ ಶಾಂತಿಯುತ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.
ದೇಶದ ಗಡಿಯಲ್ಲಿ ದೇಶ ಕಾಯಲು ಸೈನಿಕರಾದರೆ, ಇನ್ನೊಂದು ಕಡೆ ಆಂತರಿಕವಾಗಿ ರಕ್ಷಣೆ ಮಾಡುವುದು ಪೊಲೀಸ್ ಸಿಬ್ಬಂದಿಗಳು, ಕಾನೂನು ಸುವ್ಯಸ್ಥೆಯನ್ನು ಕಾಪಾಡುವುದರಿಂದ ಹಿಡಿದು ಭಯಾನಕ ಅಪರಾಧಗಳನ್ನು ಪರಿಹರಿಸುವ, ವಿಪತ್ತು ನಿರ್ವಹಣೆ, ಕೋವಿಡ್ ನಿರ್ವಹಣೆಯಂತಹಯಲ್ಲಿ ಕಾರ್ಯನಿರ್ವಹಿಸಿದಂತಹ ಪೊಲೀಸ್ ಸಿಬ್ಬಂದಿಗಳಿಗೆ ಕೃತಜ್ಞಾರಾಗಿದ್ದೇವೆ ಎಂದರು.

 


ಪೊಲೀಸರನ್ನು ರಾಷ್ಟ್ರ ಲಾಂಛನದಲ್ಲಿರುವ ಕಣ್ಣಿಗೆ ಕಾಣಿಸದ ನಾಲ್ಕನೇ ಸಿಂಹಕ್ಕೆ ಹೋಲಿಸಲಾಗುತ್ತದೆ. ಶ್ರೇಷ್ಟವಾದ ವೃತ್ತಿಗಳಲ್ಲಿ ಪೊಲೀಸ್ ವೃತ್ತಿ ಕೂಡ ಒಂದು, ಪೊಲೀಸ್ ವ್ಯವಸ್ಥೆ ಇಲ್ಲದ ಸಮಾಜವನ್ನು ಊಹಿಸಲು ಅಸಾಧ್ಯ ಎಂದು ಹೇಳಿದರು.
ಕರ್ತವ್ಯ ಪಾಲನೆಯಲ್ಲಿ ಹುತಾತ್ಮರಾದ ಪೊಲೀಸರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಆಯುಷ್ಯ, ಆರೋಗ್ಯ ನೀಡಲೆಂದು ಆಶಿಸಿ, ಹುತಾತ್ಮರ ಕುಟುಂಬ ಅಥವಾ ಪೊಲೀಸ್ ಸಿಬ್ಬಂದಿಗಳು ಸಮಸ್ಯೆಗಳನ್ನು ಜಿಲ್ಲಾಡಳಿತದೊಂದಿಗೆ ಮುಕ್ತವಾಗಿ ಹಂಚಿಕೊ0ಡಲ್ಲಿ, ಸ್ಪಂದಿಸಿ ಪರಿಹರಿಸುವುದಾಗಿ ತಿಳಿಸಿದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!