ಹಲ್ಲೆ ಹಿನ್ನಲೆ ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್..!
1 min readಚಿಕ್ಕಮಗಳೂರು: ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ. ರೌಡಿಶೀಟರ್ ಪೂರ್ಣೇಶ್ ಎಂಬುವರ ಮೇಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಇವನು ಪೊಲೀಸರ ಕಣ್ ತಪ್ಪಿಸಿ ಕಾಡು, ಕಾಫಿತೋಟ, ದೊಡ್ಡ-ದೊಡ್ಡ ಮರಗಳ ಮೇಲೆ ಮಲಗುತ್ತಿದ್ದ ಎನ್ನಲಾಗಿದೆ. ಪೂರ್ಣೇಶ್ ವಾರಂಟ್ ಜಾರಿಯಾಗಿದ್ದರು ಕೋರ್ಟಿಗೆ ಹೋಗದ ಪೂರ್ಣೇಶ್ ನನ್ನ ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಫೈರಿಂಗ್ ಹಾಗೂ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಗೈದಾಗ, ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರು ಮಾತು ಕೇಳದ ಪೂರ್ಣೇಶ್ ಕಾಲಿಗೆ ಪಿ.ಎಸ್.ಐ ದಿಲೀಪ್ ಕುಮಾರ್ ಫೈರಿಂಗ್ ಮಾಡಿದ್ದಾರೆ.
ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ನನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿ ಪೂರ್ಣೇಶ್ ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g