May 5, 2024

MALNAD TV

HEART OF COFFEE CITY

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ; ಅ. 27 “ಸ್ವದರ್ಶನ ಭವನ” ಉದ್ಘಾಟನೆ

1 min read

ಚಿಕ್ಕಮಗಳೂರು: ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ಜಿಲ್ಲಾ ಸೇವಾಕೇಂದ್ರ ನೂತನ ಕಟ್ಟಡ “ಸ್ವದರ್ಶನ ಭವನ”ದ ಉದ್ಘಾಟನಾ ಕಾರ್ಯಕ್ರಮವನ್ನು ಅ. 27 ರಂದು ಆಯೋಜಿಸಲಾಗಿದೆ ಎಂದು ಚಿಕ್ಕಮಗಳೂರು ಬ್ರಹ್ಮಾಕುಮಾರೀಸ್ ಶಾಖೆಯ ಜಿಲ್ಲಾಸಂಚಾಲಕರಾದ ಬಿ.ಕೆ.ಭಾಗ್ಯಕ್ಕ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಸ್ವದರ್ಶನ ಭವನ”ದ ಉದ್ಘಾಟನಾ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು ಅದಕ್ಕೂ ಮೊದಲು ಬೆಳಗ್ಗೆ 9.30ಕ್ಕೆ ಸದ್ಭಾವನಾ ಶಾಂತಿಯಾತ್ರೆ ನಡೆಯಲಿದೆ ಸರ್ವರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯವು 1936ರಲ್ಲಿ ಸ್ವಯಂ ನಿರಾಕಾರ ಪರಮಪಿತ ಪರಮಾತ್ಮ ಪಿತಾಶ್ರೀ ಪ್ರಜಾಪಿತ ಬ್ರಹ್ಮಾರವರ ಮೂಲಕ ಸ್ಥಾಪಿಸಿದರು. ಸಂಸ್ಥೆಯ ಪ್ರಧಾನ ಕೇಂದ್ರ ಮೌಂಟ್ ಅಬು, ರಾಜಸ್ಥಾನದಲ್ಲಿದೆ. ಸಂಸ್ಥೆಯು 21 ವರ್ಗಗಳ ಮೂಲಕ ವಿಶ್ವದಾದ್ಯಂತ 147ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ. 10,000ಕ್ಕೂ ಹೆಚ್ಚು ಸೇವಾಕೇಂದ್ರಗಳಿವೆ. ನಮ್ಮ ಜಿಲ್ಲಾ ಸೇವಾಕೇಂದ್ರ ಜ್ಞಾನ ಪ್ರಕಾಶ ಭವನವು ಬಸವನಹಳ್ಳಿಯಲ್ಲಿದೆ ಎಂದರು.

ಜಿಲ್ಲೆಯಲ್ಲಿ ಸುಮಾರು 21 ಸೇವಾಕೇಂದ್ರಗಳು ವ್ಯಾಪಕವಾಗಿ ಸೇವೆ ಸಲ್ಲಿಸುತ್ತಿವೆ. ಸಂಸ್ಥೆಯು ಗ್ರಾಮ ಉತ್ಥಾನ, ಆರೋಗ್ಯ ಶಿಬಿರಗಳು, ವ್ಯಸನಮುಕ್ತ ಶಿಬಿರ, ದಿವ್ಯಾಂಗ ಸೇವೆ, ವಯೋವೃದ್ದರ ಸೇವೆ, ಮಹಿಳಾ ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆ, ವಿದ್ಯಾರ್ಥಿಗಳಲ್ಲಿ ಚಾರಿತ್ರ್ಯ ನಿರ್ಮಾಣ, ಮಾನಸಿಕ ಸ್ಥೆರ್ಯ, ಮನೋಬಲ ಹೆಚ್ಚಿಸುವ ಸೇವೆ ಮಾಡುತ್ತಿದೆ. ಸಂಸ್ಥೆಯ ಸೇವಾ ಕಾರ್ಯಗಳು ಅಲ್ಲಿನ ಗ್ರಾಮಸ್ಥರಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈಶ್ವರೀಯ ಜ್ಞಾನ ಹಾಗೂ ರಾಜಯೋಗ ಶಿಕ್ಷಣ ನೀಡಿ ಅವರ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ ತರುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು.

ಶಿವರಾತ್ರಿ, ರಕ್ಷಾಬಂಧನ, ನವರಾತ್ರಿ ಮುಂತಾದ ಹಬ್ಬಗಳಲ್ಲಿ ವಿಶೇಷವಾಗಿ ಪರಮಾತ್ಮನ ಸಂದೇಶವನ್ನು ಮನೆ-ಮನೆಗಳಲ್ಲಿ, ಕಛೇರಿಗಳಲ್ಲಿ, ಜಾತ್ರಾ ಮಹೋತ್ಸವಗಳಲ್ಲಿ ಪ್ರತಿಯೊಬ್ಬರಿಗೂ ತಲುಪಿಸುವಲ್ಲಿ ಈ ಸಂಸ್ಥೆಯ ಶ್ರಮಿಸುತ್ತಿದೆ. ಸುತ್ತ-ಮುತ್ತಲಿನ ಹಳ್ಳಿಗಳಲ್ಲಿನ ಜನಸಾಮಾನ್ಯರ ಮನೋಬಲ, ಕಾರ್ಯಕುಶಲತೆ ಹಾಗೂ ಶ್ರೇಷ್ಟ ಜೀವನ ರೂಪಿಸುವಲ್ಲಿ ಸಂಸ್ಥೆಯು ಸಹಕಾರಿಯಾಗಿದೆ ಎಂದು ಹೇಳಿದರು.

ಅಷ್ಟೇ ಅಲ್ಲದೆ ಇಷ್ಟು ದಿನ ಬಾಡಿಗೆ ಕಟ್ಟಡದಲ್ಲಿದ್ದು ನಿರಂತರವಾಗಿ ಜನರಿಗೆ ಸೇವೆ ಮಾಡುತ್ತಾ ಬಂದಿದ್ದೇವೆ. ಸರ್ವರ ಸಹಯೋಗದಿಂದ ಹೊಸ ಸೇವಾ ಕಛೇರಿ ನಿರ್ಮಾಣ ಮಾಡಲಾಗುತ್ತಿದೆ ಎಲ್ಲರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!