May 2, 2024

MALNAD TV

HEART OF COFFEE CITY

ಚಿನ್ನದ ಹುಡುಗಿ ರಕ್ಷಿತಾ ರಾಜು ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ

1 min read

ಚಿಕ್ಕಮಗಳೂರು: ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಕಾಫಿನಾಡ ಯುವತಿ ರಕ್ಷಿತಾ ರಾಜು ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಪ್ಯಾರಾ ಏಷ್ಯನ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕರ್ನಾಟಕದ ಮೂಡಿಗೆರೆಯ ಕ್ರೀಡಾಪಟು ರಕ್ಷಿತಾ ರಾಜು ಕೂಡ ಇದೀಗ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶವೇ ಹೆಮ್ಮೆ ಪಡುವಂತಾ ಸಾಧನೆ ಮಾಡಿದ್ದಾರೆ.

ಅಂಧ ಓಟಗಾರ್ತಿಯಾಗಿರುವ ರಕ್ಷಿತಾ ರಾಜು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಬುಧವಾರ ನಡೆದ ಟಿ-11 ಸ್ಪರ್ಧೆಯಲ್ಲಿ 5 ನಿಮಿಷ 21.45 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.

ಇನ್ನು ರಕ್ಷಿತಾ ರಾಜು ಅವರ ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. “ಈ ಅಸಾಧಾರಣವಾದ ಪ್ರದರ್ಶನ ಮತ್ತು ಅಚಲವಾದ ಸಮರ್ಪಣೆ ಭಾರತದ ಹೃದಯಗಳನ್ನು ಸಂತೋಷ ಮತ್ತು ಮೆಚ್ಚುಗೆಯಿಂದ ತುಂಬುವಂತೆ ಮಾಡಿದೆ. ಇನ್ನಷ್ಟು ಅಮೋಘ ಸಾಧನೆಗಳನ್ನು ಮಾಡುತ್ತಾ ಮುನ್ನುಗ್ಗಲಿ” ಎಂದು ಹಾರೈಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!