May 7, 2024

MALNAD TV

HEART OF COFFEE CITY

ಹಿಂದೂಗಳ ಯುವಕರ ಸರಣಿ ಹತ್ಯೆ ಖಂಡಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ದೇಶ ಹಾಗು ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಯನ್ನು ಖಂಡಿಸಿ ಹಾಗೂ ದೇಶ ವಿರೋಧಿ ಕೃತ್ಯದಲ್ಲಿ ತೊಡಗಿರುವ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ. ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಆಜಾದ್ ಪಾರ್ಕ್ ವೃತ್ತ ದಲ್ಲಿ ಮಾನವ ಸರಪಳಿ ಪ್ರತಿಭಟನೆ ನಡೆಸಿದರು.

ಹಿಂದೂ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಸೇರಿದಂತೆ ಅನೇಕ ಹಿಂದೂ ಪರ ಯುವಕರ ಸರಣಿ ಹತ್ಯೆ ನಡೆಯುತ್ತಿದ್ದರು, ಹಿಂದೂಗಳ ಮತದಿಂದ ಗೆದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರ ದೇಶ ವಿರೋಧಿ ಚಟುವಟಿಕೆ ನಡೆಸುವ ಸಂಘಟನೆಗಳ ನಿಷೇಧ ಹಾಗೂ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಂಡು ಹಿಂದೂಗಳಿಗೆ ಭದ್ರತೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು, ಮಾನವ ಸರಪಳಿ ಮೂಲಕ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಹತ್ಯೆಯಾದ ಪ್ರವೀಣ್ ನೆಟ್ಟಾರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!