May 11, 2024

MALNAD TV

HEART OF COFFEE CITY

ಬೀಟಮ್ಮ ಆನೆ ಟೀಂ ಹಾವಳಿಯಿಂದ ಬೇಸತ್ತ ಗ್ರಾಮಸ್ಥರಿಂದ ಪ್ರೊಟೆಸ್ಟ್

1 min read

ಚಿಕ್ಕಮಗಳೂರು: ಬೀಟಮ್ಮ ಕಾಡಾನೆಗಳು ಹಾವಳಿ ದಿನದಿಂದ ಹೆಚ್ಚಿತ್ತಿರುವುದನ್ನು ಖಂಡಿಸಿ ಇಂದಾವರ ಸುತ್ತಮುತ್ತಲಿನ ಗ್ರಾಮಸ್ಥರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು‌.

ಕಳೆದ ಅನೇಕ ದಿನಗಳಿಂದ ಕಾಡಾನೆಗಳು ಚಿಕ್ಕಮಗಳೂರು ಸುತ್ತಮುತ್ತವೇ ಸಂಚರಿಸುತ್ತಿದ್ದು, ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದ್ದು,. ಕಾಡಾನೆಗಳಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು ರೈತರು ಬೆಳೆದಿರುವ ಬೆಳೆಯನ್ನು ನಾಶ ಮಾಡುತ್ತಿವೆ. ಇದರಿಂದ ಲಕ್ಷಾಂತರ ರೂ. ನಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಇಂದಾವರ ಸುತ್ತಮುತ್ತಲಿನ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಮಾಡಿದರು. ಕಾಡಾನೆಗಳು ನಗರ ಸಮೀಪದಲ್ಲೆ ಸಂಚರಿಸುತ್ತಿದ್ದು ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಕ್ರಮವಹಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು. ಇದೇ ವೇಳೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!