May 3, 2024

MALNAD TV

HEART OF COFFEE CITY

ರಾಸಲೀಲೆ ಪ್ರಕರಣದಲ್ಲಿ ಸಿಲುಕಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಠಿಸಿದ ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿರವರ ರಾಸ ಲೀಲೆ ಪ್ರಕರಣದ ದೃಶ್ಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ವತಿಯಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಇಂದು ಪ್ರತಿಭನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣ ಬಯಲಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ರಾಸಲೀಲೆ ಪ್ರಕರಣದಲ್ಲಿ ಸಿಲುಕಿರುವ ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ರವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ರಮೇಶ್ ಜಾರಕಿ ಹೊಳಿ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಚಪ್ಪಲಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

 ಇದೇ ವೇಳೆ ಕಾಂಗ್ರೆಸ್ ಜಿಲ್ಲಾ ವಕ್ತಾರರಾದ ಹೆಚ್.ಎಸ್ ಪುಟ್ಟಸ್ವಾಮಿ ಹಾಗೂ ಜಿಲ್ಲಾಧ್ಯಕ್ಷ ಅಂಶುಮಂತ್ ಸಚಿವ ಸ್ಥಾನದಿಂದ ರಮೇಶ್ ಜಾರಕಿ ಹೊಳಿರವರನ್ನು ವಜಾ ಮಾಡಬೇಕೆಂದು ಆಗ್ರಹಿಸಿದರು.

ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿರವರ ರಾಸ ಲೀಲೆ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಠಿಸುತ್ತಿದ್ದಂತೆ. ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಮೇಶ್ ಜಾರಕಿಹೊಳಿ ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಇದರ ಬಗ್ಗೆ ಶೀಘ್ರದಲ್ಲಿ ತನಿಖೆ ಆಗಬೇಕು. ನಾನು ನಿದೋರ್ಷಿ ಆಗುವ ವಿಶ್ವಾಸವಿದ್ದರು, ನೈತಿಕ ಹೊಣೆ ಹೊತ್ತು ನನ್ನ ಸ್ಥಾನಕ್ಕೆ ರಾಜಿನಾಮೆ ನೀಡಿರುತ್ತೇನೆ. ದಯವಿಟ್ಟು ಇದನ್ನು ಅಂಗಿಕರಿಸಬೇಕೆಂದು ವಿನಂತಿಸಿ ಮುಖ್ಯಮಂತ್ರಿಗಳಿಗೆ ರಾಜಿನಾಮೆ ಪತ್ರ ಬರೆದಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!