May 10, 2024

MALNAD TV

HEART OF COFFEE CITY

ಸದಾಶಿವ ಆಯೋಗ ಮತ್ತು ಕಾಂತರಾಜು ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು: ಸದಾಶಿವ ಆಯೋಗದ ವರದಿ ಜಾರಿ ಹಾಗೂ ಕಾಂತರಾಜು ಅವರ ಜಾತಿ ಸಮೀಕ್ಷೆಯ ವರದಿಯನ್ನ ಸಾರ್ವಜನಿಕವಾಗಿ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಮಹಾ ಒಕ್ಕೂಟ ಇಂದು ನಗರದ ಆಜಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಪ್ರತಿಭಟನಾನಿರತರನ್ನ ಕುರಿತು ಮಾತನಾಡಿದ ದಲಿತ ಸಂಘಟನೆಯ ಮುಖಂಡರು, ಸದಾಶಿವ ಆಯೋಗ ವರದಿಯನ್ನ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ತಕ್ಷಣವೇ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸದರು. ರಾಜ್ಯ ಸರ್ಕಾರವು ಕೊಟ್ಟ ಭರವಸೆಯಂತೆ ಅದನ್ನು ಈಡೇರಿಸಬೇಕು ಎಂದು ಮನವಿ ಮಾಡಿದ ಅವರು ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕ ಸ್ಥಾನಗಳಿಸುವಲ್ಲಿ ನಮ್ಮ ಸಮುದಾಯದವರ ಪಾತ್ರ ಕೂಡ ಹೆಚ್ಚಿದೆ ಎಂದು ಹೇಳಿದರು.
ಹಿಂದುಳಿದ ಪರಿಶಿಷ್ಟ ಸಮುದಾಯದಲ್ಲಿ ಆರ್ಥಿಕವಾಗಿ, ಸಾಮಾಜಿಕ ಮತ್ತು ರಾಜಕೀಯ ಪ್ರಾತಿನಿತ್ಯ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸದಾಶಿವ ಆಯೋಗ ಜಾರಿ ಮಾಡಬೇಕೆಂದು ಆಗ್ರಹಿಸಿ, ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಮೂಲ ಪರಿಶಿಷ್ಟರ ಹಿತಕ್ಕಾಗಿ ಸದಾಶಿವ ವರದಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾನಿರತರು ಕೆಲಕಾಲ ರಸ್ತೆ ತಡೆದು ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿದರು ಇದರಿಂದ ಕೆಲಕಾಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!