April 29, 2024

MALNAD TV

HEART OF COFFEE CITY

ದೇಶದ್ಯಾಂತ ಕರೆ ನೀಡಿದ್ದ ಹೆದ್ದಾರಿ ಬಂದ್ ಗೆ ಜಿಲ್ಲೆಯಲ್ಲೂ ಪ್ರತಿಭಟನೆ

1 min read

ಚಿಕ್ಕಮಗಳೂರು : ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆಗಳು ದೇಶಾದ್ಯಂತ ಕರೆ ನೀಡಿದ್ದ ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿಯೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾ ಪಂಚಾಯಿತಿ ಸಮೀಪ ಚಿಕ್ಕಮಗಳೂರುಕಡೂರು ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು ಅರ್ಧಗಂಟೆಗಳ ಕಾಲ ತಡೆದು ಪ್ರತಿಭಟನೆ ನಡೆಸಲಾಯಿತು. ಹೆದ್ದಾರಿ ಬಂದ್ ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪ ಗೌಡ ಮಾತನಾಡಿ ಕೇಂದ್ರ ಸರ್ಕಾರ ತರಾತುರಿಯಲ್ಲಿ ಸುಗ್ರೀವಾಜ್ಞೆ ಮೂಲಕ ಮೂರು ಕಾಯ್ದೆಗಳನ್ನು ಜಾರಿ ಮಾಡಿ ಆನಂತರ ಸಂಸತ್ನಲ್ಲಿ ಮಂಡಿಸಿ ರಾಷ್ಟ್ರಪತಿ ಸಹಿಯಾಗಿ ಬಂದಿತ್ತು. ಈ ಘಟನೆ ನಡೆದು ಇಂದಿಗೆ ಒಂದು ವರ್ಷ ಕಳೆದಿದ್ದು ಈ ಹಿನ್ನೆಲೆಯಲ್ಲಿ ದೇಶದ ಮೂರು ಗಡಿ ಹಾಗೂ ಎಲ್ಲಾ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ಸಂಯುಕ್ತ ಕಿಸಾನ್ ಸಂಘಟನೆಗಳ ಒಕ್ಕೂಟ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿಸಿದರು.

ಮೂರು ಕೃಷಿ ಕಾಯ್ದೆಗಳು ಹಾಗೂ ಅದರ ಜೊತೆಗೆ ಪೂರಕವಾಗಿ ತಂದ ಹಲವು ಕಾಯ್ದೆಗಳು ರೈತರಿಗೆ ಮಾರಕವಾಗದ್ದವು, ಅದ್ರಲ್ಲೂ ರೈತರ ಉತ್ಪನ್ನಗಳ ವ್ಯಾಪಾರ ವಾಣಿಜ್ಯ ಕಾಯ್ದೆ ಎಪಿಎಂಸಿಯನ್ನು ಸಂಪೂರ್ಣವಾಗಿ ನಿಷ್ಟ್ರೀಯಗೊಳಿಸುವ ಕಾಯ್ದೆಯಾಗಿದ್ದು ಇದನ್ನು ಬಹಳ ಪರಿಣಾಮಕಾರಿಯಾಗಿ ಜಾರಿಮಾಡಿರುವುದು ಕರ್ನಾಟಕ ಮಾತ್ರವಾಗಿದ್ದು ದುರದೃಷ್ಟಕರವಾದ ಸಂಗತಿ ಎಂದರು. ಈ ಮೂರು ಮಾರಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಸಂಘಟನೆಗಳು ಪ್ರತಿಭಟನೆ ಮುಂದಾದಗ ಅದನ್ನು ಮುರಿಯಲು ಸರ್ಕಾರ ಹಲವು ಕುತಂತ್ರಗಳನ್ನು ನಡೆಸಿದೆ. ರೈತರ ಮೇಲೆ ಪ್ಯಾರಾ ಮಿಲಿಟರಿ, ಪೊಲೀಸ್ ಫರ್ಸ್ ಸೇರಿದಂತೆ ಎಲ್ಲಾ ತರಹದ ಸಂಚು ರೂಪಿಸಿ ವಿಫಲವಾದ ಸರ್ಕಾರ ಕೊನೆಗೆ ಮೂರು ಕಾಯ್ದೆಗಳನ್ನು ವಾಪಾಸ್ ತಗೆದುಕೊಂಡಿದೆ. ಆದರೆ ಈ ಘೋಷಣೆಯನ್ನು ನಂಬಿಸಲು ಸಾಧ್ಯವಿಲ್ಲ ಇದನ್ನು ಸಂಸತ್ನಲ್ಲಿ ಮಂಡಿಸಿ ಕಾನೂನಾತ್ಮಕವಾಗಿ ಕಾಯ್ದೆಗಳನ್ನು ವಾಪಾಸ್ ಪಡೆಯಬೇಕು ಎಂದು ಒತ್ತಾಯಿಸಿದರು.

* ಪ್ರತಿಭಟನಾಕಾರರ ಬಂಧನ*

 

ಅರ್ಧಗಂಟೆ ಪ್ರತಿಭಟನೆ ನಡೆಸುತ್ತಿದ್ದಂತೆ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಪೊಲೀಸರು ಸುಮಾರು ೫೦ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದರು. ಈ ವೇಳೆ ಆಕ್ರೋಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸೇರಿದಂತೆ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಸಿದರು. ಪ್ರತಿಭಟನೆಯಲ್ಲಿ ಮೂಡಿಗೆರೆ ತಾಲೂಕು ಅಧ್ಯಕ್ಷ ವಸಂತ್ ಹೆಗ್ಡೆ, ಉದ್ದೇಗೌಡ, ಒಂಕಾರಪ್ಪ, ತುಳುಸೇಗೌಡ ಸೇರಿದಂತೆ ರಾಜ್ಯ ರೈತ ಸಂಘದ ಹಲವರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!