May 19, 2024

MALNAD TV

HEART OF COFFEE CITY

ವಾಲ್ಮಿಕಿ ಶ್ರೀಗಳ ಹೊರಾಟ ಬೆಂಬಲಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಿ ವಾಲ್ಮಿಕಿ ಗುರು ಪೀಠದ ಗುರುಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಸತ್ಯಾಗ್ರಹ ಬೆಂಬಲಿಸಿ ರಾಜ್ಯಾಧ್ಯಂತ ಕರೆ ನೀಡಿದ್ದ ಪ್ರತಿಭಟನೆಯನ್ನು ಬೆಂಬಲಿಸಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಎಸ್ಸಿ – ಎಸ್ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾ ಸೇರಿದಂತೆ ವಿವಿಧ ಎಸ್ಸಿ-ಎಸ್ಟಿ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಏಕಕಾಲದಲ್ಲಿ ಪ್ರತಿಭಟನೆ ನಡೆಸಿದವು.

ಎಸ್ಸಿ ಹಾಗೂ ಎಸ್ಟಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಹೆಚ್ಚಳಕ್ಕಾಗಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಶ್ರೀ ವಾಲ್ಮಿಕಿ ಪ್ರಸನ್ನಾನಂದ ಶ್ರೀಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು 152 ನೇ ದಿನಕ್ಕೆ ಸಾಗುತ್ತಿದ್ದು, ಈ ಹೋರಾಟವನ್ನು ಬೆಂಬಲಿಸಿ ಎಸ್ಸಿ – ಎಸ್ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾ ಸೇರಿದಂತೆ ವಿವಿಧ ಎಸ್ಸಿ-ಎಸ್ಟಿ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!