May 6, 2024

MALNAD TV

HEART OF COFFEE CITY

ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್ ನಿಂದ ಜನ ಜಾಗೃತಿ ಪ್ರತಿಭಟನೆ

1 min read

ಚಿಕ್ಕಮಗಳೂರು ನಗರಸಭೆಯ ಆಡಳಿತ ಹಾದಿ ತಪ್ಪಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ನಗರದಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಗಳ ಬಗ್ಗೆ ಹಾಗೂ ದುರಾಡಳಿತದ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ನಗರದ ಗಾಂಧಿ ಉದ್ಯಾನವನದಲ್ಲಿ ಜಾಗೃತಿ ಪ್ರತಿಭಟನೆಯನ್ನು ನಡೆಸಲಾಯಿತು.

ನಗರದಲ್ಲಿ ನಡೆಯುತ್ತಿರುವ ಯು.ಜಿ.ಡಿ ಕಾಮಗಾರಿ, ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ, ಬಸವನಹಳ್ಳಿ ಕೆರೆಯ ಅಭಿವೃದ್ಧಿ ಹೆಸರಿನಲ್ಲಿ ಭ್ರಷ್ಟಾಚಾರ,  ಸ್ವಾಮಿ ವಿವೇಕಾನಂದ ಮೂರ್ತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ, ವಸತಿ ಹೀನರಿಗೆ ಆಶ್ರಯ ಮನೆಗಳ ವಿತರಣೆಯಲ್ಲಿ ವಿಳಂಬ, ಅಮೃತ್ ಯೋಜನೆಯ ಹೆಸರಿನಲ್ಲಿ ಹಣ ಲೂಟಿ ಮುಂತಾದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿ ಹಾಗೂ ಇವುಗಳನ್ನು ತನಿಖೆಗೆ ಒಳಪಡಿಸಿಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!