May 16, 2024

MALNAD TV

HEART OF COFFEE CITY

ಉಂಡೆದಾಸರಹಳ್ಳಿ ರಸ್ತೆಗೆ ಪುನೀತ್ ಹೆಸರು ನಾಮಕರಣ

1 min read

ಚಿಕ್ಕಮಗಳೂರು: ನಟ ಅಪ್ಪು ಅವರ ಹೆಸರು ಮತ್ತು ಸಾಮಾಜಿಕ ಸೇವಾ ಕಾರ್ಯಗಳನ್ನು ಸ್ಮರಿಸುವ ನಿಟ್ಟಿನಲ್ಲಿ ರಸ್ತೆಗೆ ಪುನೀತ್ ರಾಜ್‌ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ ಎಂದು ಸ್ಥಳೀಯ ಜೂಲಿಯಾನಾ ಡಿಸೋಜ ತಿಳಿಸಿದರು.
ನಗರದ ಉಂಡೇದಾಸರಹಳ್ಳಿಯ ಸೆಂಟ್ ಮೇರಿಸ್ ಶಾಲೆಯ ರಸ್ತೆಗೆ ಸ್ಥಳೀಯ ನಿವಾಸಿಗಳು ಇತ್ತೀಚೆಗೆ ನಿಧನರಾದ ನಟ ಪುನೀತ್‌ರಾಜ್‌ಕುಮಾರ್ ಅವರ ಹೆಸರನ್ನು ಭಾನುವಾರ ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದರು.ಬೆಳಿಗ್ಗೆ ನಟ ಪುನೀತ್ ರಾಜ್‌ಕುಮಾರ್ ಅವರ ಹೆಸರಿನ ನಾಮಫಲಕಕ್ಕೆ ಸಾಮೂಹಿಕವಾಗಿ ಪೂಜೆ ಸಲ್ಲಿಸಿದ ನಿವಾಸಿಗಳು ನಟನ ಆತ್ಮಕ್ಕೆ ಶಾಂತಿಕೋರಿ ಒಂದು ನಿಮಿಷ ಮೌನಾಚರಣೆ ಮಾಡಿದರು.ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಸ್ಥಳೀಯ ಮುಖಂಡ ಎಸ್.ಟಿ.ಸೋಮಶೇಖರ್, ಪುನೀತ್ ರಾಜ್‌ಕುಮಾರ್ ಅವರು ತಮ್ಮ ಅದ್ಬುತ ನಟನೆಯ ಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಹೇಳಿದರು.
ಸ್ಥಳೀಯ ನಿವಾಸಿಗಳಾದ ವಸಂತಕುಮಾರ್, ಚಂದ್ರು, ರಾಜು, ರವಿಕುಮಾರ್, ಕೇಶವ, ಮೇಬಲ್ ಸ್ಟೆಲ್ಲಾ, ಉಮೇಶ್, ಚಂದ್ರಶೇಖರ್, ಗೀತಾ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!