May 9, 2024

MALNAD TV

HEART OF COFFEE CITY

ಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ

1 min read

ಚಿಕ್ಕಮಗಳೂರು: ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ, ಮಧುಮೇಹ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಭಾಷೆ, ದೇಶದಸಂಸ್ಕೃತಿ, ಪರಂಪರೆ, ಸಾಮಾನ್ಯ ಜ್ಞಾನ ಹಾಗೂ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಿಧ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ವಿಶೇಷವಾಗಿ ಮಕ್ಕಳಿಗಾಗಿ ಎರಡು ನಿಮಿಷಗಳ ಕಾಲ ಶುದ್ಧ ಕನ್ನಡ ಮಾತನಾಡುವುದು, ರಸಪ್ರಶ್ನೆ, ಪಿಕ್ ಅಂಡ್ ಸ್ಪೀಚ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಬಹಳ ಉತ್ಸುಕತೆಯಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಹಾಗೆ ಸ್ಪರ್ಧೆಯಲ್ಲಿ ಗೆದ್ದಂತಹ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸೇನೆಯವರು, ವಿದ್ಯಾರ್ಥಿಗಳು, ಪೋಷಕರು, ತೀರ್ಪುಗಾರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!