May 17, 2024

MALNAD TV

HEART OF COFFEE CITY

ಬೆಂಕಿ ತಗುಲಿ ಹೊತ್ತಿ ಉರಿದ ರೇಡಿಯೇಟರ್ ಸರ್ವೀಸ್ ಅಂಗಡಿ

1 min read

 

ಚಿಕ್ಕಮಗಳೂರು.ನ.೧೧: ರೇಡಿಯೇಟರ್ ಸರ್ವೀಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅಂಗಡಿ ಹೊತ್ತಿ ಉರಿದ ಘಟನೆ ನಗರದ ಐ.ಜಿ. ರಸ್ತೆಯಲ್ಲಿ ನಡೆದಿದೆ. ನಗರದ ಐ.ಜಿ. ರಸ್ತೆಯಲ್ಲಿರುವ ಲುಕ್ಮಾನ್ ಎಂಬುವರ ರೇಡಿಯೇಟರ್ ಸರ್ವೀಸ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಶುಕ್ರವಾರ ಲುಕ್ಮಾನ್ ಅವರು ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಂಗಡಿಯಲ್ಲಿದ್ದ ಜನರೇಟರ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ನೋಡ-ನೋಡುತ್ತಿದ್ದಂತೆ ಇಡೀ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಅಂಗಡಿಯಲ್ಲಿದ್ದ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿದ್ದು,

ಅಂಗಡಿಯಿo koದ ಹೊರ ಬಂದ ಧಟ್ಟ ಹೊಗೆ ಕೆಲ ಹೊತ್ತು ಐಜಿ ರಸ್ತೆಯಲ್ಲಿ ಆತಂಕ ಸೃಷ್ಟಿಸಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂ. ನಷ್ಟ ಆಗಿರುವ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡದಿಂದ ಕೆಲ ಹೊತ್ತು ಐಜಿ ರಸ್ತೆಯಲ್ಲಿ ವಾಹನ ಸಂಚಾರ ಸ್ತಬ್ದಗೊಂಡಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!