May 4, 2024

MALNAD TV

HEART OF COFFEE CITY

ರಾಹುಲ್ ಗಾಂಧಿ ಪೋಸ್ಟರ್ ವಿವಾದ; ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

1 min read

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಮುಖವನ್ನು ‘ನವಯುಗದ ರಾವಣ’ ಎಂದು ಬಿಂಬಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದು ಈ ಹಿನ್ನಲೆ ಇಂದು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳ ಘಟಕದಿಂದ ಕೂಡ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಸೇವಾದಳ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲಾಗಿದ್ದು, ರಸ್ತೆಯ ಮಧ್ಯೆನಿಂತು ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿದ ಬಿಜೆಪಿ ವಿರುದ್ಧ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪ್ರಧಾನಿ ನರೇಂದ್ರ ಮೋದಿ ಅದಾನಿಗೆ ಶರಣಾಗಿರುವ ಭಾವಚಿತ್ರ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾನಿರತ ಕೈ ಕಾರ್ಯಕರ್ತರು ಬಿಜೆಪಿಗಿರ ಕುಚೋದ್ಯದ ನಡಳಿಕೆಗಳ ಖಂಡಿಸಿ ಧಿಕ್ಕಾರ ಕೂಗಿದರು. ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಮುಖಂಡರ ಹೇಳಿಕೆಗಳಿಗೂ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!