May 5, 2024

MALNAD TV

HEART OF COFFEE CITY

ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ: ಎಚ್.ಡಿ. ಕುಮಾರಸ್ವಾಮಿ ಬಣ್ಣನೆ

1 min read

ಚಿಕ್ಕಮಗಳೂರು: ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿ.ಎಂ ಎಚ್.ಡಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ. ನಿಜವಾದ ರಾಮರಾಜ್ಯ ಎಂಬ ಜನಾಭಿಪ್ರಾಯಕ್ಕೆ ನಾನೂ ದನಿಗೂಡಿಸುತ್ತೇನೆ ಎಂದಿರುವ ಅವರು ರಾಮಮಂದಿರ ನಿರ್ಮಾಣ ದೇಶದ ಜನರ ನಿರೀಕ್ಷೆಯಾಗಿತ್ತು ಎಂದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಮಾಜಿ ಸಿ.ಎಂ ಎಚ್. ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಕಾಂಗ್ರೆಸ್ ಜೊತೆಗಿನ ಮೈತ್ರಿಗಿಂತ ಬಿಜೆಪಿ ಜೊತೆ ಮೈತ್ರಿಗೆ ಅಜಗಜಾಂತರ ವ್ಯತ್ಯಾಸ ಇದೆ ಎಂದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್‌ ನಲ್ಲಿ ಮಂಡ್ಯ ಜಿಲ್ಲೆಯ ಜಿಡಿಎಸ್ ಶಾಸಕರು ಮುಖಂಡರೊಂದಿಗೆ ವಾಸ್ತವ್ಯ ಹೂಡಿ ದಿಢೀರ್ ಬೆಂಗಳೂರಿಗೆ ತೆರಳುವ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ನವರು ರಾಮಮಂದಿರ ಉದ್ಘಾಟನೆಗೆ ಹೋಗದಿರುವ ನಿರ್ಧಾರ ಅವರ ಪಕ್ಷದ ತೀರ್ಮಾನವಾಗಿದ್ದು ಹೋಗದಿರುವುದಕ್ಕೆ ಕಾರಣ ಅವರೇ ಹೇಳಬೇಕು ಎಂದರು. ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ , ಖುಷಿ ಇದೆ, ಬಿಜೆಪಿ ಜೆಡಿ ಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ ಎಂದಿರುವ ಎಚ್.ಡಿ.ಕೆ , ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ, ಕೆಲವೆಡೆ ಸ್ಥಳೀಯವಾಗಿ ಎರಡೂ ಪಕ್ಷಗಳ ನಾಯಕರ ಜೊತೆಗಿನ ಸಮಸ್ಯೆ ಬಗೆಹರಿಸುತ್ತೇವೆ ಎಂದರು. ಸಂಕ್ರಾಂತಿ ನಂತರ ಮೈತ್ರಿಯ ಔಟ್ ಕಮ್ ಸ್ಪರ್ಷವಾಗಲಿದೆ ಎಂದು ತಿಳಿಸಿದ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ ಸ್ಪರ್ಧಿಸಿದರೂ ಗೆಲ್ಲುವ ಸಾಧ್ಯತೆ ಇದೆ ಆದರೆ ಕಳೆದ ಬಾರಿ ಕಾಂಗ್ರೆಸ್ ನಮಗೆ ಕೇವಲ 2-3 ಪರ್ಸೆಂಟ್ ಮಾತ್ರ ಸಹಕಾರ ನೀಡಿತ್ತು ಎಂದು ಆರೋಪಿಸಿದರು. ಮಂಡ್ಯದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಮೈತ್ರಿ ನಂತರ ಪರಿಸ್ಥಿತಿ ಏನಾಗುತ್ತೋ ನೋಡೋಣ ಎಂದರು. ಸುಮಲತಾ ಸ್ಪರ್ಧೆ ಬಗ್ಗೆ ಸಹಾ ಬಿಜೆಪಿ ಜೊತೆಗಿನ ಹೊಂದಾಣಿಕೆ ಮುಗಿದ ಮೇಲೆ ಚರ್ಚೆ ತೀರ್ಮಾನ ಆಗಲಿದೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!