May 17, 2024

MALNAD TV

HEART OF COFFEE CITY

ನಗರಸಭೆ ಚುನಾವಣೆಗೆ ಸಕಲ ಸಿದ್ಧತೆ

1 min read

ಚಿಕ್ಕಮಗಳೂರು: ನಗರಸಭೆ ಚುನಾವಣೆ ಮತದಾನ ಪ್ರಕ್ರಿಯೇ ಇಂದು ನಡೆಯಲಿದ್ದು, ಮತದಾರರು ನಗರದ 35 ವಾರ್ಡ್‍ನ ಅಭ್ಯರ್ಥಿಗಳ ಭವಿಷ್ಯವನ್ನು ಮತಯಂತ್ರದಲ್ಲಿ ಭದ್ರಪಡಿಸಲಿದ್ದಾರೆನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸಾಮಾನ್ಯ ಮತಗಟ್ಟೆ 66, ಆಕ್ಸಿಲರಿ ಮತಗಟ್ಟೆ 2, ಸೂಕ್ಷ್ಮ ಮತಗಟ್ಟೆ 29, ಅತಿ ಸೂಕ್ಷ್ಮ ಮತಗಟ್ಟೆ 13 ಸೇರಿದಂತೆ 110 ಮತ ಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾನ ಪ್ರಕ್ರಿಯೇ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನಡೆಯಲಿದೆ.

ಪ್ರತಿಯೊಂದು ಮತಗಟ್ಟೆಗೆ 4 ಜನ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪಿಆರ್‍ಓ, ಎಪಿಆರ್‍ಓ, ಪಿಓಸಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾ ಗಿದೆ. ಅತೀ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 250 ಜನ ಪೊಲೀಸ್ ಸಿಬ್ಬಂದಿ ಪಿಆರ್‍ಓ 110 ಜನ ಎಪಿಆರ್‍ಓ 110, ಮತಗಟ್ಟೆ ಅಧಿಕಾರಿಗಳು 220 ಜನ ಸಿಬ್ಬಂದಿಗಳು ಸೇರಿದಂತೆ 700ಜನ ಸಿಬ್ಬಂದಿಗಳನ್ನು ಮತಗಟ್ಟೆ ಕೇಂದ್ರಗಳಿಗೆ ನಿಯೋಜಿಸಲಾಗಿದೆ.

ನಗರದ ಐಡಿಎಸ್‍ಜಿ ಕಾಲೇಜು ಆವರಣದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಮಸ್ಟರಿಂಗ್ ಕಾರ್ಯ ನಡೆಸಲಾಯಿತು. ಈ ವೇಳೆ ಇವಿಎಂ ಯಂತ್ರ, ಮತದಾರರ ಪಟ್ಟಿ, ಶಾಹಿ ಸೇರಿದಂತೆ ಇತರೆ ಪರಿಕರಗಳನ್ನು ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನೀಡ ಲಾಯಿತು.

ನಗರಸಭೆ ಚುನಾವಣೆಗೆ 110 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತಗಟ್ಟೆಗಳಿಗೆ ನಿಯೋಜ ನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಂಜೆಯ ವೇಳೆಗೆ ಮತಗಟ್ಟೆಗಳಿಗೆ ತೆರಳಿ ಸಕಲ ಸಿದ್ಧತೆಗಳನ್ನು ನಡೆಸಿಕೊಂಡರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!