ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಜನವಸತಿ ಪ್ರದೇಶದ ಮನೆಗೆ ಬೆಂಕಿ
1 min readಗ್ಯಾಸ್ ಸಿಲಿಂಡರ್ ಲೀಕೇಜ್ ಯಿಂದಾಗಿ ನಗರದ ಜನವಸತಿ ಹಾಗೂ ಕಮರ್ಷಿಯಲ್ ಸ್ಟ್ರೀಟ್ಸ್ ಮಧ್ಯೆ ಇರುವ ಮನೆಯೊಂದಕ್ಕೆ ಬೆಂಕಿ ಹೊತ್ತಿರುವ ಘಟನೆ ನೆಹರೂ ರಸ್ತೆಯ ಬಡಾವಣೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ನೆಹರು ರಸ್ತೆಯ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದ ಮನೆಯೇ ಹೊತ್ತಿ ಉರಿದು ದುರ್ಘಟನೆ ಒಂದು ಸಂಭವಿಸಿದೆ. ದಯಾನಂದ್ ಎಂಬುವವರ ಮನೆಗೆ ಅಗ್ನಿ ಸ್ಪರ್ಷವಾಗಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ,ಆದರೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿಗಳ ಮೌಲ್ಯದ ಪೀಠೋಪಕರಣಗಳು ನಷ್ಟವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದ ಜನರು ಕೂಡಲೇ ಕರೆ ಮಾಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಪಡೆ ಹೆಚ್ಚಾಗಬಹುದಿದ್ದ ಬೆಂಕಿ ದುರಂತವನ್ನು ತಪ್ಪಿಸಿದ್ದಾರೆ. ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಕೆ.ಎನ್ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಗ್ನಿ ನಂದಿಸಲಾಯಿತು. ಮತ್ತಷ್ಟು
ಹೆಚ್ಚಾಗುತ್ತಿದ್ದ ಬೆಂಕಿ ಅವಘಡವನ್ನು ತಪ್ಪಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸಾರ್ವಜನಿಕರು ಅಭಿನಂದಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g