May 5, 2024

MALNAD TV

HEART OF COFFEE CITY

ನಾಳೆಯಿಂದ 5 ದಿನಗಳು ಪ್ರವಾಸಿಗರಿಗೆ ನಿರ್ಬಂಧ: ವೀಕೆಂಡ್, ಕ್ರಿಸ್ ಮಸ್ ಪ್ಲಾನ್ ಮಾಡಿರುವವರು ನಿಮ್ಮ ಪ್ರವಾಸ ಮುಂದೂಡಿಕೊಳ್ಳಿ..!

1 min read

ಚಿಕ್ಕಮಗಳೂರು: ದತ್ತಜಯಂತಿ ಹಿನ್ನಲೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ನಾಳೆಯಿಂದ ಡಿಸೆಂಬರ್ 27ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಚಿಕ್ಕಮಗಳೂರು ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. 6 ದಿನಗಳ ಕಾಲ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದೆ. ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಡಿ.24 ರಿಂದ 3ದಿನಗಳವರೆಗೆ ನಡೆಯಲಿರುವ ದತ್ತಜಯಂತಿಗೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಆಯೋಜನೆ ಮಾಡಿದ್ದು, ಇಲಾಖೆಯ ಸಾವಿರಾರು ಪೊಲೀಸ್ ಸಿಬ್ಬಂದಿಗಳಿಂದ ಚಿಕ್ಕಮಗಳೂರು ನಗರವು ಖಾಕಿಮಯಗೊಳ್ಳಲಿದೆ.

ಪ್ರವಾಸಿಗರಿಲ್ಲದೆ ವೀಕೆಂಡ್ ನಲ್ಲಿ ಪ್ರವಾಸಿ ತಾಣಗಳು ಬಣಗುಡುವಂತಾಗಲಿದ್ದು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ, ಹೊನ್ನಮ್ಮನ ಹಳ್ಳ ಸೇರಿದಂತೆ ಹಲವು ಪ್ರದೇಶಗಳು ಸ್ತಬ್ದಗೊಳ್ಳಲಿವೆ. ಅದಲ್ಲದೆ ಪ್ರವಾಸಿಗರನ್ನೇ ನಂಬಿರುವ ಹೋಟೆಲ್’ಗಳು, ರೆಸ್ಟೋರೆಂಟ್’ಗಳು, ಹೋಂ ಸ್ಟೇಗಳು ವ್ಯಾಪಾರವಿಲ್ಲದೆ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಡಿಸೆಂಬರ್ 24ರ ಬೆಳಗ್ಗೆ 6 ರಿಂದ 26ರ ಮಧ್ಯರಾತ್ರಿ 12 ರವರೆಗೆ ಚಿಕ್ಕಮಗಳೂರು,ಕೊಪ್ಪ,ಮೂಡಿಗೆರೆ,ಶೃಂಗೇರಿ, ಎನ್.ಆರ್.ಪುರ ತಾಲೂಕುಗಳಲ್ಲಿ ಮಧ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಇದರಿಂದಾಗಿ ಬಹುತೇಕ ವಹಿವಾಟುಗಳು ಸಹಾ ಸ್ತಬ್ದಗೊಳ್ಳಲಿದೆ. ಈ ನಡುವೆ ನಗರದ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನಗರದ ರಸ್ತೆಯ ಪ್ರಮುಖ ಮಾರ್ಗಗಳ ಬದಲಾವಣೆ ಕೂಡಾ ಮಾಡಲಾಗಿದ್ದು, ಪ್ರಮುಖ ಬೀದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಅಲ್ಲದೇ ಬದಲಿ ಮಾರ್ಗಕ್ಕೆ ಸೂಚನೆ ನೀಡಲಾಗಿದೆ. ದತ್ತ ಜಯಂತಿ ನಡೆಯುವ ಮೂರು ದಿನಗಳು ಬಾರಿ ವಾಹನಗಳು, ಮಲ್ಟಿ ಎಕ್ಸೆಲ್ ವಾಹನಗಳ ಸಂಚರಿಸದಂತೆ ಸೂಚನೆ ನೀಡಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!