ಜೆಡಿಎಸ್ ಗೂಡಿಗೆ ಮರಳಿದ ವೈ.ಎಸ್.ವಿ. ದತ್ತ
1 min readಕಡೂರು : ಕಡೂರು ಕ್ಷೇತ್ರದ ಮಾಜಿ ಶಾಸಕ, ಹೆಚ್.ಡಿ. ದೇವೇಗೌಡರವರ ಮಾನಸ ಪುತ್ರ ಎಂದೇ ಕರೆಸಿಕೊಳ್ಳುವ ವೈ.ಎಸ್.ವಿ ದತ್ತಾ ಮರಳಿ ಜೆಡಿಎಸ್ ಗೂಡಿಗೆ ಸೇರಿದ್ದಾರೆ.
ಇತ್ತಿಚೆಗೆ ವೈ.ಎಸ್.ವಿ. ದತ್ತ, ಮುನಿಸಿಕೊಂಡು ಕಡೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗುತ್ತದೆ ಎಂಬ ಭರವಸೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದರು. ಕಡೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧಕ ಭಾದಕಗಳನ್ನು ಲೆಕ್ಕ ಹಾಕಿದ ವೈ.ಎಸ್.ವಿ ದತ್ತ ನಿನ್ನೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ವೈ.ಎಸ್.ವಿ. ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಭೇಟಿ ನೀಡಿದ ಮಾತುಕತೆ ನಡೆಸಿದರು. ಇದರ ಫಲಶೃತಿಯಾಗಿ ಗೂಡು ಬಿಟ್ಟಿದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮರಳಿ ಜೆಡಿಎಸ್ ಗೂಡಿಗೆ ಸೇರಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g