May 5, 2024

MALNAD TV

HEART OF COFFEE CITY

ಮಕ್ಕಳ ಸಂರಕ್ಷಣೆಯಲ್ಲಿ ಮಾಧ್ಯಮ ಪಾತ್ರ ಕಾರ್ಯಗಾರ

1 min read

ಚಿಕ್ಕಮಗಳೂರು : ಕರ್ನಾಟಕ ಸರ್ಕಾರ, ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮಕ್ಕಳ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪ್ರೆಸ್ ಕ್ಲಬ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಸಂರಕ್ಷಣೆಯಲ್ಲಿ ಮಾಧ್ಯಮ ಪಾತ್ರದ ಕುರಿತು “ಘನತೆಯ ಬದುಕು” ಕೈಪಿಡಿ ಬಿಡುಗಡೆ ಮತ್ತು ಅರಿವು ಕಾರ್ಯಗಾರವನ್ನು ಬಿಡುಗಡೆಗೊಳಿಸಲಾಯಿತು.

 

ಘನತೆಯ ಬದುಕು ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ ಜಿಲ್ಲಾ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು, ಬಳಸುವ ಪದಗಳು ಸಹ ಅವರ ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಮಾಧ್ಯಮಗಳ ಮಕ್ಕಳ ಸಂವೇದನಾಶೀಲತೆಯನ್ನು ಅರಿತು ಮಕ್ಕಳ ಬಗ್ಗೆ ವರದಿಗಳಲ್ಲಿ ಅತ್ಯಂತ ಜಾಗರೂಕತೆಯಿಂದ ಪದ ಬಳಕೆ ಮಾಡಬೇಕು ಎಂದು ಹೇಳಿದರು.
ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ.ಎ.ಎಸ್, ಮಕ್ಕಳು ಸಹ ಪ್ರಜೆಗಳಾಗಿದ್ದು, ಸಂವಿಧಾನದ 21 ನೇ ಪರಿಚ್ಛೇಧ ಹೇಳುವಂತೆ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ. ಆದ್ದರಿಂದ ಮಕ್ಕಳಿಗೂ ಘನತೆಯ ಬದುಕನ್ನು ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ ಸಂಯೋಜಕ ರಾಘವೇಂದ್ರ ಭಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾ ನಾಯ್ಕ್, ಪ್ರೆಸ್ ಕ್ಲಬ್ ಅಧ್ಯಕ್ಷ ಬಿ.ಎಂ.ರವಿ, ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರಕಾಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸುಧಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಂಗನಾಥ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!