May 4, 2024

MALNAD TV

HEART OF COFFEE CITY

ಎಸ್.ಟಿ.ಜೆ. ಕಾಲೇಜಿನಲ್ಲಿ ಲಸಿಕೆ ಅಭಿಯಾನ – ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳು

1 min read

ಕೋವಿಡ್ ತೊಲಗಿಸಿ – ಸಮೃದ್ಧ ಭಾರತ ನಿರ್ಮಿಸಿ ಎಂಬ ಘೋಷ ವಾಕ್ಯದೊಂದಿಗೆ ಎಸ್.ಟಿ.ಜೆ. ಮಹಿಳಾ ಕಾಲೇಜ್, ತಾಲೂಕು ವೈದ್ಯಾಧಿಕಾರಿಗಳ ಕಛೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ವೈ.ಅರ್.ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿನಿಯರುಗಳಿಗೆ ಕೋವಿಡ್ 19 ಲಸಿಕಾಕರಣ ಅಭಿಯಾನ ಕಾರ್ಯಕ್ರಮವನ್ನು ಎಸ್.ಟಿ.ಜೆ. ಮಹಿಳಾ ಕಾಲೇಜ್‌ನಲ್ಲಿ ಇಂದು ನಡೆಸಲಾಯಿತು.

ಕೋವಿಡ್ 19 ಮಹಾ ಮಾರಿಯಿಂದ ಸುರಕ್ಷರಾಗಿರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ ವಿದ್ಯಾರ್ಥಿನಿಯರುಗಳಿಗೆ ಕೋವಿಡ್ 19 ಲಸಿಕಾಕರಣ ಅಭಿಯಾನ ಕಾರ್ಯಕ್ರಮಕ್ಕೆ ಎಸ್.ಟಿ.ಜೆ. ಮಹಿಳಾ ಪದವಿ ಕಾಲೇಜ್‌ನ ಪ್ರಾಂಶುಪಾಲರಾದ ಪ್ರೋ || ಜೆ.ಕೆ ಭಾರತಿ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕೋವಿಡ್ ಸೋಂಕಿನಿಂದ ಸಂಭವಿಸುವ ತೊಂದರೆಗಳನ್ನು ತಡೆಗಟ್ಟಲು ಲಸಿಕೆ ಸಹಕಾರಿಯಾಗಿದೆ. 2 ಡೋಸ್ ಲಸಿಕೆಯನ್ನು ಪಡೆದಿದ್ದರು ಸೋಂಕು ತಗಲುವ ಸಾಧ್ಯತೆ ಇದೆ. ರೋಗ ಬರುವ ಮುನ್ನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ ಸರ್ಕಾರದಿಂದಲೇ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ.  ಎಲ್ಲಾ ವಿದ್ಯಾರ್ಥಿಗಳಿಗೂ ಸಂಭ್ರಮದ ದಿನ. ಹಾಗಾಗಿ ಎಲ್ಲರೂ ಧೈರ್ಯದಿಂದ, ಉತ್ಸಾಹದಿಂದ ಪಾಲ್ಗೋಳುತ್ತಿದ್ದಾರೆ. ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋದಕ ಶಕ್ತಿ ಹೆಚ್ಚುವ ಸಾಧ್ಯತೆ ಇದೆ. ಮೂಡನಂಬಿಕೆಗೆ ಒಳಗಾಗಬೇಡಿ. ಧೈರ್ಯದಿಂದ ಇದ್ದು ಎಲ್ಲರೂ ಒಗ್ಗಟಾಗಿ ಎದುರಿಸುವುದು ಬಹಳ ಮುಖ್ಯವಾಗಿದೆ. ತಮ್ಮ ಜೀವದ ಹಂಗು ತೊರೆದು ನಮ್ಮೆಲ್ಲರ ರಕ್ಷಣೆಗಾಗಿ ಹಗಲಿರುಳು ದುಡಿಯುತ್ತಿರುವ ಎಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಸ್ವಯಂ ಸೇವಕರ ಬಗ್ಗೆ ಗೌರವ ಭಾವನೆ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಗಳು ಶಾಲಾ-ಕಾಲೇಜ್‌ಗಳಿಗೆ ಬರುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಉದಾಸೀನ ಮಾಡಬೇಡಿ, ಉದಾಸೀನತೆ ಮಾಡದರೆ ಆತಂಕದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ರು.

 

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಎಸ್.ಟಿ.ಜೆ. ಮಹಿಳಾ ಪದವಿ ಕಾಲೇಜ್‌ನ ಉಪಾನ್ಯಾಸಕರು ಹಾಗೂ ಎನ್.ಎಸ್.ಎಸ್. ಅಧಿಕಾರಿ ಎಂ.ಆರ್. ಚಂದ್ರಶೇಖರ್, ಪ್ರಾಚಾರ್ಯರ ಸದಾಶಯವಾದ ಕೊರೋನ ತೊಲಗಿಸೋಣ, ಸಮೃದ್ಧ ಭಾರತ ನಿರ್ಮಿಸೋಣ  ಎಂಬ ಉದ್ದೇಶದಿಂದ ವಿಶ್ವ ವಿದ್ಯಾಲಯದ ನಿರ್ದೇಶನದ ಮೇರೆಗೆ ಈ ದಿನ ಲಸಿಕೆ ಅಭಿಯಾನವನ್ನು  ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಾಗಬೇಕು. ಶಿಕ್ಷಣ ಕೇತ್ರದಲ್ಲಿ ಪ್ರಗತಿ ಸಾಧಿಸುವ ಉದ್ದೇಶದಿಂದ ಆದಷ್ಟು ಬೇಗ ಈ ಖಾಯಿಲೆಯಿಂದ ದೇಶ ವಿಮುಕ್ತವಾಗಲಿ. ಸಮೃದ್ಧ ಭಾರತ ನಿರ್ಮಾಣವಾಗಲಿ ಎನ್ನುವುದು ನಮ್ಮೇಲ್ಲರ ಸದಾಶಯ. ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಎಲ್ಲರೂ ಪಡೆಯಬೇಕು. ಲಸಿಕೆಯ ಬಗ್ಗೆ ಯಾರು ಋಣಾತ್ಮಕವಾಗಿ ಮಾತನಾಡಬಾರದು. ಲಸಿಕೆ ವಿತರಣೆಯಲ್ಲಿ ಸೇವೆ ಮಾಡುತ್ತಿರುವ ಎಲ್ಲರ ಬಗ್ಗೆ ನಾವು ಯೋಚಿಸಬೇಕು. ಲಸಿಕೆ ಪಡೆಯುವ ಮೂಲಕ ನಾವು ಅವರಿಗೆ ಸಹಕಾರ ನೀಡೋಣ. ಇಂದು 416 ವಿದ್ಯಾರ್ಥಿಗಳು ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಹಾಗೇಯೆ ಆರೋಗ್ಯ ಇಲಾಖೆಯ ಮಾರ್ಗದರ್ಶನದಂತೆ ಬೇರೆ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರುಗಳಿಗೂ ಲಸಿಕೆ ಹಾಕುವ ಉದ್ದೇಶ ಹೊಂದಿದ್ದೇವೆ. ಅವರೆಲ್ಲರಿಗೂ ಒಳ್ಳೆಯ ಆರೋಗ್ಯ ಸಿಗಲಿ, ಒಳ್ಳೆಯ ರಾಷ್ಟç ನಿರ್ಮಾಣವಾಗಲಿ ಎಂದು ಹೇಳಿದರು.

ವಿದ್ಯಾರ್ಥಿನಿಯರು ಅತ್ಯಂತ ಲವಲವಿಕೆಯಿಂದ, ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕಾಕರಣದಲ್ಲಿ ಭಾಗವಹಿಸಿ ಲಸಿಕೆ ಪಡೆದರು. ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ 416 ವಿದ್ಯಾರ್ಥಿಗಳು ಲಸಿಕೆ ಪಡೆಯುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ವಯಂ ಸೇವಕ ವಿದ್ಯಾರ್ಥಿಗಳು ಲಸಿಕೆ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಲು ಕಾರಣಕರ್ತರಾದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಡಾ|| ಸೀಮಾ, ಸ್ಕೌಟ್ಸ್ ಮತ್ತು ಗೈಡ್ಸ್ವ ಕಮೀಷನರ್ ಎಂ.ಎಂ. ಷಡಾಕ್ಷರಿ, ತಾಲೂಕು ಆರೋಗ್ಯ ಇಲಾಖೆಯ ಜೀವರಾಜ್ ಮುಂತಾದವರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

https://www.malnadtv.com/MALNAD%20TV_55_1.0.apk

 

ಕೋವಿಶೀಲ್ಡ್ ಲಸಿಕೆ ಪಡೆದ ಸವಿತಾ ಸಮಾಜದ ಕ್ಷೌರಿಕರು

 

ವ್ಯಾಕ್ಸಿನ್ ಕುರಿತು ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!