May 20, 2024

MALNAD TV

HEART OF COFFEE CITY

ಚಿಕ್ಕಮಗಳೂರು ಗ್ರಾಮಾಂತರ ಇನ್ಸ್‍ಪೆಕ್ಟರ್ ಆಗಿ ಸಚಿನ್ ಕುಮಾರ್ ಅಧಿಕಾರ ಸ್ವೀಕಾರ 

1 min read

 

 

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸಬ್ ಇನ್ಸ್‍ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಸಚಿನ್ ಕುಮಾರ್ ಗ್ರಾಮಾಂತರ ಠಾಣೆಯ ಇನ್ಸ್‍ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಸಚಿನ್ ಕುಮಾರ್ 2016ರಿಂದ ಚಿಕ್ಕಮಗಳೂರು ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ, ಗ್ರಾಮಾಂತರ ಠಾಣೆಯ ಇನ್ಸ್‍ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿಕೊಂಡಿದ್ದು ವಿಜಯ್ ಕುಮಾರ್ ಅವರಿಂದ ಅಧಿಕಾರ ಹಸ್ತಾಂತರಿಸಿಕೊಂಡಿದ್ದಾರೆ. 2005ನೇ ಸಾಲಿನಲ್ಲಿ ಪೊಲೀಸ್ ಇಲಾಖೆ ಸೇರಿದ್ದ ಸಚಿನ್ ಜಿಲ್ಲೆಯ ವಿವಿಧ ಠಾಣೆಯಲ್ಲಿ ಸಬ್ ಇನ್ಸ್‍ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಉಪನಿರೀಕ್ಷರಾಗಿ ಶೃಂಗೇರಿ, ಕಳಸ, ಬೀರೂರು, ಅಜ್ಜಂಪುರ ಹಾಗೂ ಲಕ್ಕವಳ್ಳಿ ಪೆÇಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ನಕ್ಸಲ್ ಕಾರ್ಯಾಚರಣೆಯಲ್ಲೂ ಕೂಡ ಭಾಗವಹಿಸಿದ್ದರು. 2016 ನೇ ಸಾಲಿನಿಂದ ಪೆÇಲೀಸ್ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದ ಇವರು ಈವರೆಗೆ ಲೋಕಾಯುಕ್ತ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಚಿನ್ ಕುಮಾರ್, ಇಂದು ಗ್ರಾಮಾಂತರ ಪೆÇಲೀಸ್ ಠಾಣೆಗೆ ಪೆÇಲೀಸ್ ನಿರೀಕ್ಷಕರಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪೆÇಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ವಿಜಯಕುಮಾರ್ ರವರಿಂದ ಅಧಿಕಾರ ಹಸ್ತಾಂತರ ಮಾಡಿಕೊಂಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!