May 14, 2024

MALNAD TV

HEART OF COFFEE CITY

ಸ್ಕಾರ್ಫ್- ಕೇಸರಿ ಶಾಲು ವಿವಾದ; ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಒಡೆದಾಟ

1 min read

 

ಕೊಪ್ಪ: ಕೇಸರಿ ಶಾಲು- ಸ್ಕಾರ್ಫ್ ವಿವಾದ ಪೋಷಕರ ಸಭೆಯಲ್ಲಿ ನಿನ್ನೆ ಶಾಂತಿಯುತ ಪರಿಹಾರ ಕಂಡ ಬೆನ್ನಲ್ಲೇ ಇದೀಗ ಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ವಿವಾದ ವಿಕೋಪಕ್ಕೆ ತಿರುಗಿದೆ.
ಕೇಸರಿ ಶಾಲು- ಸ್ಕಾರ್ಫ್ ವಿಚಾರವಾಗಿ ಮಂಗಳವಾರ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗಳ ಗುಂಪು ಕಾಲೇಜು ಆವರಣದಲ್ಲಿಯೇ ಕೈ ಕೈ ಮಿಲಾಯಿಸಿಕೊಂಡು ಬಡಿದಾಡಿದ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ

ಕೊಪ್ಪ ಡಿಗ್ರಿ ಕಾಲೇಜಿನಲ್ಲಿ ಸ್ಕಾರ್ಫ್ – ಕೇಸರಿ ಶಾಲು ವಿವಾದ ಶುರುವಾದ ಬೆನ್ನಲ್ಲೇ, ಕೊಪ್ಪದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿಯೂ ವಿವಾದ ಏರ್ಪಟ್ಟಿತ್ತು. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದನ್ನು ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕಳೆದ ನಾಲ್ಕು ದಿನಗಳಿಂದ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತಿದ್ದರು. ಇಂದು ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಇಷ್ಟು ದಿನ ಪ್ರತಿಭಟನೆಯಲ್ಲಿ ವ್ಯಕ್ತವಾಗುತ್ತಿದ್ದ ವಿರೋಧ ಇದೀಗ ವಿದ್ಯಾರ್ಥಿಗಳು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಘಟನೆಗೆ ಸಂಬಂಧಿಸಿದಂತೆ ಕೊಪ್ಪ ಠಾಣೆಯಲ್ಲಿ ದೂರು ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!