May 15, 2024

MALNAD TV

HEART OF COFFEE CITY

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ದೂರು ದಾಖಲು

1 min read

ಬಾಳೆಹೊನ್ನೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಜೀವಬೆದರಿಕೆ ಒಡ್ಡಿ ಕಾರಿನಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಗ್ರಾಮಸ್ಥರೇ ಹುಡುಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ.

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ 49 ವರ್ಷದ ಇಸ್ಮಾಯಿಲ್ ಎಂಬಾತನನ್ನು ಬಾಳೆಹೊನ್ನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಕಿರುಕುಳ ನೀಡಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಗ್ರಾಮಸ್ಥರೇ ಹುಡುಕಿ, ಥಳಿಸಿ ಬಳಿಕ ಠಾಣೆಗೆ ಒಪ್ಪಿಸಿದ್ದಾರೆ. ಭಾನುವಾರ ರಾತ್ರಿ ಮನೆಯಿಂದ ಹೊರಗೆ ಬಂದಿದ್ದ ಬಾಲಕಿಯನ್ನು ಆರೋಪಿ ಇಸ್ಮಾಯಿಲ್ ಪುಸಲಾಯಿಸಿ ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳು ಕಾಣಿಸದೆ ಇದ್ದುದರಿಂದ ಗಾಬರಿಗೊಂಡ ಬಾಲಕಿಯ ತಂದೆ ಹುಡುಕಾಟ ನಡೆಸಿದಾಗ ಕಾರಿನಲ್ಲಿ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಬಾಲಕಿಯ ತಂದೆಯನ್ನು ನೋಡುತ್ತಲೇ ಆರೋಪಿ ಇಸ್ಮಾಯಿಲ್ ಕಾರಿನಿಂದ ಬಾಲಕಿಯನ್ನು ಇಳಿಸಿ ಪರಾರಿಯಾಗಿದ್ದ. ಅಲಸೂರು ವಲಯದ ಕಾಡಿನಲ್ಲಿ ಅಡಗಿದ್ದ ಆರೋಪಿಯನ್ನು ಗ್ರಾಮಸ್ಥರು ಹುಡುಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಗಾಂಜಾ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಆರೋಪಿ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!