May 4, 2024

MALNAD TV

HEART OF COFFEE CITY

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ವೈದ್ಯನಿಗೆ ಸ್ಥಳೀಯರಿಂದ ಧರ್ಮದೇಟು

1 min read

ಚಿಕ್ಕಮಗಳೂರು : ತಾಲೂಕು ವೈದ್ಯಾಧಿಕಾರಿಯೊಬ್ಬ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಸ್ಥಳೀಯರು ಧರ್ಮದೇಟು ಕೊಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಎನ್ ಆರ್ ಪುರ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಎಲ್ಡೋಸ್ ಎಂಬಾತ ಅದೇ ಇಲಾಖೆಯ ಡಿ ಗ್ರೂಪ್ ಮಹಿಳಾ ಸಿಬ್ಬಂದಿಗೆ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆ ವಸತಿಗೃಹದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿರುವ ವಿಚಾರ ತಿಳಿದ ಗ್ರಾಮಸ್ಥರು ಘಟನಾ ಸ್ಥಳಕ್ಕೆ ದೌಡಾಯಿಸಿ, ಮಹಿಳೆಯನ್ನ ರೂಮಿನಲ್ಲಿ ಕೂಡಿ ಹಾಕಿಕೊಂಡು ಏನು ಮಾಡುತ್ತಿದ್ದೆ ಎಂದು ಪ್ರಶ್ನಿಸಿದ್ದಾರೆ..? ಹಾಗೂ ಮುಖ-ಮೂತಿ ನೋಡದೆ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ..ಈ ಹಿಂದೆಯೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಎಲ್ಡೋಸ್ ವಿರುದ್ದ ಹಲವು ಆರೋಪಗಳು ಕೇಳಿ ಬಂದಿದ್ದು ನರ್ಸ್ ಕೆನ್ನೆಗೆ ಹೊಡೆದು ಅಮಾನತಾಗಿದ್ದ ಘಟನೆ ಕೂಡ ನಡೆದಿತ್ತು.ಸದ್ಯ ಈ ಪ್ರಕರಣ ಬಾಳೆಹೊನ್ನೂರು ಪೊಲೀಸ್ ರಾಣೆಯಲ್ಲಿ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!