May 19, 2024

MALNAD TV

HEART OF COFFEE CITY

ಸರಳ ಶ್ರೀ ದೇವಿರಮ್ಮನವರ ದೀಪೋತ್ಸವ

1 min read
Shri Deviramman's bonfire is simply a celebration: District Collector

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕು, ಮಲ್ಲೇನಹಳ್ಳಿ ಬಿಂಡಿಗ ಶ್ರೀ ದೇವಿರಮ್ಮನವರ ದೀಪೋತ್ಸವ ನವೆಂಬರ್ 3 ರಿಂದ 6 ರವರೆಗೆ ನಡೆಯಲಿದ್ದು, ಕೋವಿಡ್-19ರ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಶ್ರೀ ದೇವಿರಮ್ಮ ದೇವಾಲಯದ ದೀಪವಾಳಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಕ್ತಾಧಿಗಳ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ನವೆಂಬರ್ 3 ರಂದು ಶ್ರೀ ದೇವಿರಮ್ಮ ಬೆಟ್ಟಕ್ಕೆ ಹತ್ತುವವರ ಸಂಖ್ಯೆಯನ್ನು ಈ ಬಾರಿ ಕಡಿತಗೊಳಿಸಲಾಗುತ್ತದೆ ಎಂದು ಹೇಳಿದರು.
ಶ್ರೀ ದೇವಿರಮ್ಮನವರ ಬೆಟ್ಟವು ಅತ್ಯಂತ ಕಡಿದಾಗಿದ್ದು, ಬೆಟ್ಟಕ್ಕೆ ಹತ್ತುವ ಮಾರ್ಗಗಳು ತುಂಬಾ ಕಿರಿದಾಗಿರುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ಬೆಟ್ಟಕ್ಕೆ ಹತ್ತುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಷ್ಟ ಸಾಧ್ಯವಿರುವುದರಿಂದ ಬೆಟ್ಟದ ಮೇಲೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೋಳ್ಳುವುದನ್ನು ತಡೆಹಿಡಿಯಲಾಗಿದೆ ಎಂದ ಅವರು ಇದರಿಂದ ಕೊವೀಡ್ ಸಾಂಕ್ರಾಮಿಕ ರೋಗವು ಹರಡುವಿಕೆಯನ್ನು ನಿಯಂತ್ರಿಸಲು ಸಾಧ್ಯ ಎಂದರು.
ಶ್ರೀ ದೇವಿರಮ್ಮ ಬೆಟ್ಟ ಹತ್ತುವ ಮತ್ತು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾಧಿಗಳು, ಸಾರ್ವಜನಿಕರು ರಾಜ್ಯದ ಜನರ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲಾಡಳಿತ ರೂಪಿಸಿರುವ ಕೋವಿಡ್ ನಿಯಮಾವಳಿಯನ್ನು ಪಾಲಿಸಿ, ಮನೆಗೆ ಒಬ್ಬರಂತೆ ಹಾಗೂ ಗ್ರಾಮಕ್ಕೆ ನಿಗಧಿಗೊಳಿಸಲಾದ ಪಾಸ್‌ನೊಂದಿಗೆ ಜನರು ದರ್ಶನ ಪಡೆಯಬಹುದಾಗಿದೆ ಎಂದು ಹೇಳಿದರು.
ದೇವಿರಮ್ಮ ಬೆಟ್ಟಕ್ಕೆ ಜನರು ನಾಲ್ಕು ದಿಕ್ಕುಗಳಿಂದ ಆಗಮಿಸುವು ಸಾಧ್ಯತೆ ಹೆಚ್ಚಿದ್ದು, ಅಂತಹ ಸ್ಥಳಗಳಲ್ಲಿ ಬ್ಯಾರಿಗೇಡ್ ಆಳವಡಿಸಿ ಹೆಚ್ಚು ಜನ ಸೇರುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾಣೀಕ್ಯಧಾರದಿಂದ ದರ್ಶನಕ್ಕೆ ಆಗಮಿಸುವುದನ್ನು ಸಂಪೂರ್ಣವಾಗಿ ಬಂದ್ ಮಾಡಿ, ದೇವಿ ದರ್ಶನಕ್ಕೆ ಮಲ್ಲೇನಹಳ್ಳಿ ಮಾರ್ಗದಿಂದ ಮಾತ್ರ ಜನರು ಆಗಮಿಸಲು ಅನುವು ಮಾಡಿಕೊಡಲಾಗುವುದು ಎಂದ ತಿಳಿಸಿದರು.


ಕೋವಿಡ್ ನಿಮಿತ್ತ ಭಕ್ತಾದಿಗಳಿಗೆ ಜಾತ್ರೆಯಲ್ಲಿ ಯಾವುದೇ ರೀತಿಯ ದೇವಿ ಮೇರವಣಿಗೆಗೆ ಅವಕಾಶವಿರುವುದಿಲ್ಲ ಮತ್ತು ಸಾಮೂಹಿಕ ಊಟದ ವ್ಯವಸ್ಥೆ ನಿಷೇಧಿಸಲಾಗಿರುತ್ತದೆ, ನವೆಂಬರ್ 2 ರಿಂದ 7 ರವೆರೆಗೆ ನಿರಂತರವಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಅವರು ಜಾತ್ರೆಗೆ ಬರುವಂತಹ ಭಕ್ತದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಒದಗಿಸುವಂತೆ ಸೂಚಿಸಿದರು.
ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್ ಅಕ್ಷಯ್ ಮಾತನಾಡಿ. ಭಕ್ತಾದಿಗಳು ಬೆಟ್ಟ ಹತ್ತುವಾಗ ಯಾವುದೇ ರೀತಿಯ ಅಹಿತಕರ ಘಟನೆಗಳಾಗದಂತೆ ಮುಂಜಾಗೃತ ಕ್ರಮವಾಗಿ ಅಂಬ್ಯುಲೆನ್ಸ್, ಮೆಡಿಕಲ್ ಟೀಮ್, ಕಿಟ್, ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಆರೋಗ್ಯ ಇಲಾಖೆ ಮತ್ತು ಆಗ್ನಿಶಾಮಕ ಅಧಿಕಾರಿಗಳಿಗೆ ತಿಳಿಸಿದರು.
ಹೋರ ರಾಜ್ಯದಿಂದ ಬರುವಂತಹ ಪ್ರವಾಸಿಗರನ್ನು ಜಾತ್ರೆ ನಡೆಯುವಂತಹ ದಿನಗಳಲ್ಲಿ ನಿಷೇಧಿಸಲಾಗಿದ್ದು ಮತ್ತು ಬೆಟ್ಟದ ಸುತ್ತ- ಮುತ್ತ ಇರುವ ಹೊಂ ಸ್ಟೇ ಗಳಿಗೆ ಪ್ರವಾಸಿಗರು ತಂಗುವುದನ್ನು ನಿರ್ಬಂಧಿಸಲಾಗಿದೆ ಎಂದರು.
ಕೋವಿಡ್‌ನ ಮಾರ್ಗ ಸೂಚಿ ಅನ್ವಯ ಅತ್ಯಂತ ಸರಳವಾಗಿ ದೇವಿರಮ್ಮ ದರ್ಶನ ಪಡೆಯುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿದ ಅವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ ಹೆಚ್.ಎಲ್ ನಾಗರಾಜು, ತಹಸೀಲ್ದಾರ್ ಕಾಂತರಾಜ್, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ದೇವಸ್ಥಾನ ಸಮಿತಿಯವರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!