ಸಿದ್ದರಾಮಯ್ಯ ತಮ್ಮ ಹಗರಣ ಮುಚ್ಚಿಕೊಳ್ಳಲು ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ
1 min read
ಸಿ.ಎಂ ಸಿದ್ದರಾಮಯ್ಯ ತಮ್ಮ ಹಗರಣ ಮುಚ್ಚಿಕೊಳ್ಳಲು ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಕಾರ್ಕಳ ಶಾಸಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.
ಕಾರ್ಕಳ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರದಲ್ಲಿ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು ಹಗರಣ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆಂದು ಆರೋಪಿಸಿದ್ದಾರೆ. ನಾನು ಹಗರಣ ಮಾಡಿದ್ದೀನಿ ನಿಮ್ದು ಹಗರಣ ತೆಗಿತೀನಿ ಎಂಬ ನೀತಿ ಅನುಸರಿಸಿ
ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿ ರುವುದು ಆಶ್ಚರ್ಯ ಹಾಗೂ ಹಾಸ್ಯಾಸ್ಪದ ಎಂದು ಸಿದ್ದರಾಮಯ್ಯ ನಡೆಗೆ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿ.ಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ವಾಲ್ಮೀಕಿ, ಮುಡಾ ಹಗರಣ ಬರುವ ತನಕ ಬಿಜೆಪಿ ಹಗರಣಗಳು ನಿಮಗೆ ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿರುವ ಸುನೀಲ್ ಕುಮಾರ್ ನಿಮ್ಮದೇ ಸರ್ಕಾರ ಇರುವಾಗ ಇಲ್ಲಿಯವರೆಗೂ ತನಿಖೆ ಯಾಕೆ ಮಾಡಲಿಲ್ಲ, ನಿಮ್ಮ ಕಾಲ ಬುಡಕ್ಕೆ ಬಂದಾಗ ಬಿಜೆಪಿ ಬಗ್ಗೆ ಹೇಳುತ್ತಿದ್ದೀರಿ ಮುಖ್ಯಮಂತ್ರಿ ಸಿದ್ದು ಸದನದ ಒಳಗೆ ಎಷ್ಟೊಂದು ಸುಳ್ಳು ಹೇಳಿದ್ದಾರೆ ಎಂದಿದ್ದಾರೆ. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ 11 ಕೋಟಿ ಅವ್ಯವಹಾರ ಎಂದಿದ್ದಾರೆ ಇನ್ನು ಸಹ ಸರ್ಕಾರ 11 ಕೋಟಿ ಹಣವನ್ನೇ ಬಿಡುಗಡೆ ಮಾಡಿಲ್ಲ ಹಾಗದರೆ
ಅವ್ಯವಹಾರ ಹೇಗೆ ಆಗುತ್ತೆ ಎಂದರು
ಸದನದ ಒಳಗೆ ಇಷ್ಟೋಂದು ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ನಾನು ಎಂದು ಕಂಡಿಲ್ಲ ಎಂದಿರುವ ಸುನೀಲ್ ಕುಮಾರ್ ಅವ್ಯವಹಾರ ಆಗಿದ್ದರೆ ಯಾವ ತನಿಖೆಯಾದರೂ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g