April 29, 2024

MALNAD TV

HEART OF COFFEE CITY

ಕಾಫಿನಾಡಲ್ಲಿ ಸಿಂಗಲ್ ಡಿಜಿಟ್‍ನಲ್ಲಿದ್ದ ಸೋಂಕು 78ಕ್ಕೆ ಏರಿಕೆ, ಆತಂಕದಲ್ಲಿ ಕಾಫಿನಾಡಿಗರು

1 min read

 

ಕಾಫಿನಾಡಲ್ಲಿ ನಿತ್ಯ ಸಿಂಗಲ್ ಡಿಜಿಟ್‍ನಲ್ಲಿದ್ದ ಕೊರೋನಾ ಸೋಂಕಿತರ ಸಂಖ್ಯೆ ಒಂದೇ ದಿನ 78ಕ್ಕೆ ಏರಿರೋದ್ರಿಂದ ಜಿಲ್ಲೆಯ ಜನ ಆಂತಕಕ್ಕೀಡಾಗಿದ್ದಾರೆ. ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಕೊರೋನಾ ಸ್ಫೋಟಗೊಂಡಿದ್ದು ಮೂಡಿಗೆರೆಯಲ್ಲಿ 37 ಹಾಗೂ ಚಿಕ್ಕಮಗಳೂರಿನಲ್ಲಿ 17 ಕೇಸ್ ಪತ್ತೆಯಾಗಿವೆ. ಮೂಡಿಗೆರೆಯ ಹಾಸ್ಟೆಲ್‍ನಲ್ಲಿ 37 ಮಕ್ಕಳಿಗೆ ಹಾಗೂ ಚಿಕ್ಕಮಗಳೂರಿನ 15 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯ ಗ್ರಾಮೀಣ ಮಟ್ಟದಲ್ಲೇ ಸೋಂಕು ಹೆಚ್ಚಾಗುತ್ತಿರೋದು ಗ್ರಾಮೀಣ ಭಾಗದ ಜನರನ್ನ ಮತ್ತಷ್ಟು ಕಂಗೆಡಿಸಿದೆ. ಮೂಡಿಗೆರೆ ತಾಲೂಕಿನ ಬಾಳೂರಿನ ಹಾಸ್ಟೆಲ್‍ನಲ್ಲಿ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿತ್ತು. ಎಲ್ಲರಿಗೂ ಪರೀಕ್ಷೆ ನಡೆಸಿದಾಗ 37 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರಿನ ಹಾಸ್ಟೆಲ್‍ನಲ್ಲಿ ರ್ಯಾಂಡಮ್ ಟೆಸ್ಟ್‍ನಲ್ಲಿ 17 ಮಕ್ಕಳಿಗೆ ಪಾಸಿಟಿವ್ ಪತ್ತೆಯಾಗಿದೆ. ಎಲ್ಲಾ ಮಕ್ಕಳನ್ನ ಹೋಂ ಐಸೋಲೇಶನ್ ಮೂಲಕ ಚಿಕಿತ್ಸೆ ಮುಂದುವರೆಸುತ್ತಿದ್ದು, ಯಾರಿಗೂ ರೋಗದ ಲಕ್ಷಣಗಳು ಇಲ್ಲವೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರೋದು ಜಿಲ್ಲೆಯ ಜನರನ್ನ ಆತಂಕಕ್ಕೀಡು ಮಾಡಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಸರ್ಕಾರ ಜಿಲ್ಲೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಆಗ್ರಹಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!