May 16, 2024

MALNAD TV

HEART OF COFFEE CITY

ಸೀತಾಳಗಿರಿ, ಮುಳ್ಳಯ್ಯನಗಿರಿ ಪ್ರದೇಶ ಸ್ವಚ್ಚತಾ ಕಾರ್ಯಕ್ರಮ

1 min read

ಚಿಕ್ಕಮಗಳೂರು-ಚಿಕ್ಕಮಗಳೂರು ರೆಸಾರ್ಟ್ ಮಾಲಿಕರ ಸಂಘದ ವತಿಯಿಂದ ಸೀತಾಳಗಿರಿ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಸೋಮವಾರ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಸಿಲ್ವರ್ ಸ್ಕೈ ರೆಸಾರ್ಟ್ ಮಾಲಿಕರಾದ ಚೇತನ್ ಮಾತನಾಡಿ ಚಿಕ್ಕಮಗಳೂರು ರೆಸಾರ್ಟ್ ಮಾಲೀಕರ ಸಂಘದಿAದ ಇಂದು ಸೀತಾಳಗಿರಿ ಹಾಗೂ ಮುಳ್ಳಯ್ಯನಗಿರಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾಫಿಕುಯ್ಲು ಬರುವ ಮೊದಲು ಮತ್ತು ಮುಗಿದ ನಂತರ ಸ್ವಚ್ಚತೆಯನ್ನು ಮಾಡಲಾಗುವುದು, ಕಾಫಿನಾಡು ಎಂದೇ ಹೆಸರುವಾಸಿಯಾದ ಚಿಕ್ಕಮಗಳೂರು ಜಿಲ್ಲೆಯು ಪ್ರವಾಸಿ ತಾಣವಾಗಿದ್ದು, ಕರ್ನಾಟಕದ ಅತಿ ಎತ್ತರದ ಶಿಖರವಾದ ಮುಳ್ಳಯ್ಯನಗಿರಿಯನ್ನು ತನ್ನ ಒಡಲಿನಲ್ಲಿ ಇರಿಸಿಕೊಂಡಿದೆ ಎಂದರು.
ಪ್ರತಿ ವಾರ ಬಹಳಷ್ಟು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಾರೆ, ಬಂದ ಸಮಯದಲ್ಲಿ ಪ್ಲಾಸ್ಟಿಕ್, ಪೇಪರ್ನಂತಹ ಕಸವನ್ನು ಎಲ್ಲೆಂದರಲ್ಲಿ ಹಾಕುತ್ತಿದ್ದಾರೆ, ಪ್ರವಾಸಿಗರು ತಾವು ತಂದ ತಿನಿಸುಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸದ ಬುಟ್ಟಿಯಲ್ಲಿಯೇ ಹಾಕಬೇಕು, ಸುತ್ತಲಿನ ಪರಿಸರವನ್ನು ಸ್ವಚ್ಚ ಮತ್ತು ಸುಂದರವಾಗಿಸಲು ಸಹಕರಿಸಬೇಕು ಎಂದು ತಿಳಿಸಿದರು,
ಗ್ಲೋಬಲ್ ವಿಲೇಜ್ ರೆಸಾರ್ಟ್ ಮಾಲೀಕ ಪರಮೇಶ್, ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯು ಪ್ರವಾಸಿ ತಾಣವಾಗಿದ್ದು, ಪ್ರವಾಸಕ್ಕೆಂದು ಬರುವ ಪ್ರವಾಸಿಗರು ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಸಿಕ್ಕಸಿಕ್ಕ ಜಾಗದಲ್ಲಿ ಎಸೆಯದೆ, ಕಸದ ಬುಟ್ಟಿ ಅಥವಾ ಕಸ ಸಂಗ್ರಹಣೆಗೆಂದು ನಿಗಧಿಪಡಿಸಿರುವ ಜಾಗದಲ್ಲಿ ಕಸವನ್ನು ಹಾಕಬೇಕೆಂದು ಈ ಮೂಲಕ ಪ್ರವಾಸಿಗರಿಗೆ ತಿಳಿಸಿದರು.
ಮುಳ್ಳಯ್ಯನಗಿರಿ ಹಾಗೂ ಸೀತಾಳಗಿರಿ ಪ್ರದೇಶವನ್ನು ಸ್ವಚ್ಚವಾಗಿಡುವುದು ನಮ್ಮ ಕರ್ತವ್ಯವಾಗಿದೆ, ರೆಸಾರ್ಟ್ ಮಾಲೀಕರ ಸಂಘದಿಂದ ಪ್ರತಿ ಸೋಮವಾರ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮುಂದೆಯೂ ಇದೇರೀತಿಯಲ್ಲಿ ಮುಂದುವರೆಸಿಕೊAಡು ಹೋಗಲಾಗುವುದು, ಸ್ಥಳಿಯ ಶಾಸಕರು ಮತ್ತು ಜಿಲ್ಲಾಡಳಿತ ಇದರ ಬಗ್ಗೆ ಹೆಚ್ಚಿನ ಗಮನಹರಿಸಿ, ಮುಳ್ಳಯ್ಯನಗಿರಿ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಚ ಮತ್ತು ಸುಂದರವಾಗಿಡಲು ಸಹಕರಿಸಬೇಕು ಹಾಗೂ ಸಾರ್ವಜನಿಕ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಕೊಡುವಂತೆ ತಿಳಿಸಿದರು.
ಈ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಶೌಚಾಲಯ ಹೋಟೆಲ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಅತಿ ಶೀಘ್ರದಲ್ಲಿ ನಿರ್ಮಿಸಬೇಕೆಂದು ಆಗ್ರಹಿಸಿದ ರೆಸಾರ್ಟ್ ಮಾಲೀಕರು ಈ ತಿಂಗಳ ೩೦ ರಂದು ಸಂಘದ ವತಿಯಿಂದ ಶಾಸಕ ಹೆಚ್.ಡಿ ತಮ್ಮಯ್ಯನವರಿಗೆ ಸನ್ಮಾನ ಸಮಾರಂಭ ಆಯೋಜಿಸಿದ್ದು ಈ ಸಂದರ್ಭದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಸಲ್ಲಿಸಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ಹನಿಡ್ಯೂ ರೆಸಾರ್ಟ್ ಸುರೇಶ್, ತ್ರಿವಿಕ್ ರೆಸಾರ್ಟ್ ಜಿ.ಎಂ.ಭಾನುಕುಮಾರ್, ಆನಂದ್, ಸಿರಿ ರೆಸಾರ್ಟ್ ನವೀನ್, ಬ್ಲಾಸಮ್ ರೆಸಾರ್ಟ್ ನಂಜಪ್ಪ, ಕಾಫಿಗ್ರೋ ಹುಮರ್, ಕಿರಣ್, ಜವರೈನ್ ರೆಸಾರ್ಟ್ ವಿಸ್ಮಿತಕೌಂಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!