ಕುಡಿದ ಮತ್ತಿನಲ್ಲಿ ತಾಯಿಯನ್ನ ಕೊಂದು ಸುಟ್ಟು ಹಾಕಿ ಪಕ್ಕದಲ್ಲೇ ಮಲಗಿದ ಪುತ್ರ…!
1 min read
ಚಿಕ್ಕಮಗಳೂರು.ಜು.31: ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನ 52 ವರ್ಷದ ಭವಾನಿ ಎಂದು ಗುರುತಿಸಲಾಗಿದೆ. ಅಮ್ಮನನ್ನೇ ಕೊಂದ ಮಗ ಪವನ್ 28 ವರ್ಷದ ಯುವಕ. ಪವನ್ ಮದುವೆ ಕೂಡ ಆಗಿರಲಿಲ್ಲ. ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ. ಕಳೆದ ರಾತ್ರಿ ತಾಯಿಯನ್ನ ಕೊಂದು ಮನೆಯೊಳಗೆ ಬೆಂಕಿ ಹಾಕಿ ಸುಟ್ಟು ಹಾಕಿದ್ದಾನೆ. ಬಳಿಕ ತಾಯಿ ಮೃತದೇಹ ಬೆಂಕಿಯಲ್ಲಿ ಬೇಯುತ್ತಿದ್ದರೆ ಕೊಲೆಗಾರ ಮಗ ಪ್ರಜ್ಞೆ ಇಲ್ಲದವನಂತೆ ಅಲ್ಲೇ ಪಕ್ಕದಲ್ಲಿ ಮಲಗಿದ್ದಾನೆ. ತಾಯಿ ಭವಾನಿ ಮೃತದೇಹ ಬಹುತೇಕ ಸುಟ್ಟುಹೋಗಿದ್ದು ಕಾಲು ಹಾಗೂ ಕೈ ಮಾತ್ರ ಉಳಿದಿದೆ. ಅಕ್ಕಪಕ್ಕದವರಿಂದ ವಿಷಯ ತಿಳಿದು ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಾಯಿಯನ್ನ ಕೊಂದ ಮಗ ಪವನ್ ನನ್ನ ಆಲ್ದೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

