May 20, 2024

MALNAD TV

HEART OF COFFEE CITY

‘ಆಟೋ ಕಪ್’ ಕ್ರಿಕೆಟ್ ಪಂದ್ಯಾವಳಿಗೆ ಎಸ್ಪಿ ವಿಕ್ರಮ್ ಅಮಟೆ ಚಾಲನೆ

1 min read

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಆಟೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ 68 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಎಸ್ಪಿ ವಿಕ್ರಮ್ ಅಮಟೆ ಚಾಲನೆ ನೀಡಿದರು.

ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಆಟೋ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ನಡೆಯಲಿದೆ. ಮೊದಲ ದಿನವಾದ ಇಂದು ಪಟಾಕಿ ಮೈದಾನದಲ್ಲಿ ಆಟೋ ಕಪ್ ಕ್ರೀಡಾಕೂಟಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಮ್ ಅಮಟೆ ಬ್ಯಾಟಿಂಗ್ ಮಾಡುವುದರ ಮೂಲಕ ಚಾಲನೆ ನೀಡಿದರು. ಮೂರು ದಿನಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಟೋ ಮಾಲೀಕರು ಹಾಗೂ ಚಾಲಕರ ಸಂಘದಿಂದ ಆಯೋಜನೆ ಮಾಡಿಕೊಳ್ಳಲಾಗಿದ್ದು ಅಂದ ಮಕ್ಕಳ ಶಾಲೆ, ವೃದ್ದಾಶ್ರಮಗಳಿಗೆ ತೆರಳಿ ಸೇವೆ ಸಲ್ಲಿಸುವುದಾಗಿ ಪದಾಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!