May 10, 2024

MALNAD TV

HEART OF COFFEE CITY

ಕೆಲಸದ ಒತ್ತಡ ಕಡಿಮೆ ಮಾಡಲು ಕ್ರೀಡಾ,ಸಾಂಸ್ಕೃತಿಕ ಕಾರ್ಯಕ್ರಮ ಅವಶ್ಯ: ಜಿಲ್ಲಾಧಿಕಾರಿ ಮೀನಾ ನಾಗರಾಜ್

1 min read

ಚಿಕ್ಕಮಗಳೂರು: ಕಂದಾಯ ಇಲಾಖೆಯಲ್ಲಿ ವರ್ಷವಿಡಿ ದಿನದ 24 ಗಂಟೆಯೂ ಕೂಡ ಕರ್ತವ್ಯ ನಿರ್ವಹಿಸುವಂತಹ ಸಿಬ್ಬಂದಿಗಳಿಗೆ ಒತ್ತಡವನ್ನು ಕಡಿಮೆ ಮಾಡುವ ದೃಷ್ಟಿಯಿಂದ ಎರಡು ದಿನಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದ ವತಿಯಿಂದ ಡಿಸೆಂಬರ್ 09 ಮತ್ತು 10 ರಂದು ನಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ 2023 ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು, 9 ತಾಲೂಕಿನ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು, ಜಿಲ್ಲಾಧಿಕಾರಿಗಳ ಕಚೇರಿಯ ಎಲ್ಲಾ ಸಿಬ್ಬಂದಿಗಳು 14 ತಂಡದಂತೆ ಎರಡು ದಿನದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಇಲಾಖೆಯಲ್ಲಿ ವರ್ಷವಿಡಿ ದಿನದ 24 ಗಂಟೆಯೂ ಕೂಡ ಕರ್ತವ್ಯ ನಿರ್ವಹಿಸುವಂತಹ ಸಿಬ್ಬಂದಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಷ್ಟೇ ಅಲ್ಲದೇ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಒಂದೆಡೆ ಸೇರಿ ತುಂಬಾ ಉತ್ಸುಕತೆಯಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಮಾತನಾಡಿ, ಕಬಡ್ಡಿ, ವಾಲಿಬಾಲ್, ಕ್ರಿಕೆಟ್, ಚೆಸ್, ಬ್ಯಾಡ್ಮಿಂಟನ್ ಇನ್ನಿತರ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಎಲ್ಲಾ ಕ್ರೀಡಾಪಟುಗಳಿಗೂ ಶುಭ ಹಾರೈಸಿದರು. ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ನೌಕರರು ತುಂಬಾ ಒತ್ತಡದಿಂದ ಕೆಲಸಗಳನ್ನ ಮಾಡುತ್ತಾರೆ ಆ ಒತ್ತಡದಿಂದ ಹೊರ ತರಲು ಈ ಕ್ರೀಡೆಯನ್ನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಹೆಚ್ ಡಿ ರಾಜೇಶ್ ಮಾತನಾಡಿ, ಕ್ರೀಡಾ ಸ್ಪೂರ್ತಿಯ ಜೊತೆಗೆ ಜೀವನದಲ್ಲಿ ಚೈತನ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರೀಡೆಯನ್ನು ಆಯೋಜನೆ ಮಾಡಲಾಗಿದ್ದು, ಆಗಮಿಸಿರುವಂತಹ ಎಲ್ಲಾ ತಾಲೂಕು ಕಂದಾಯ ಇಲಾಖೆ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಎಂದ ಅವರು ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವೆ ಹೊರತು ಪ್ರಶಸ್ತಿ ಗೆಲ್ಲುವುದಲ್ಲ ಎಂದು ಹೇಳಿದರು.

ತಹಶೀಲ್ದಾರ್ ಕಾಂತರಾಜ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಹಾಗೂ ನೌಕರರು ತುಂಬಾ ಒತ್ತಡದಲ್ಲಿ ಕೆಲಸವನ್ನು ನಿರ್ವಹಿಸುತ್ತಿರುತ್ತಾರೆ. ವರ್ಷಕ್ಕೊಮ್ಮೆ ಈ ರೀತಿಯ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕವಾಗಿ ಸದೃಢವಾಗುವುದರ ಜೊತೆಗೆ ಎಲ್ಲ ಇಲಾಖೆಗಳೊಂದಿಗಿನ ಬಾಂಧವ್ಯ ವೃದ್ಧಿಯಾಗುತ್ತದೆ. ಕೆಲಸದ ಒತ್ತಡದಲ್ಲಿ ಈ ರೀತಿಯ ಮನೋರಂಜನೆ ಅವಶ್ಯಕತೆವಾಗಿದೆ ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!