May 2, 2024

MALNAD TV

HEART OF COFFEE CITY

ಸ್ಥಗಿತಗೊಂಡಿದ್ದ ರೈಲು ಸಂಚಾರ ಮತ್ತೆ ಆರಂಭ_ಶೋಭಾ ಕರಂದ್ಲಾಜೆ ಮಾಹಿತಿ

1 min read

 

ಚಿಕ್ಕಮಗಳೂರು: ತಾತ್ಕಾಲಿಕವಾಗಿ ರದ್ದಾಗಿದ್ದ ಶಿವಮೊಗ್ಗ_ಚಿಕ್ಕಮಗಳೂರು ರೈಲುಗಳು ಜ.3 ಮತ್ತು 4 ರಿಂದ ರೈಲು ಸಂಚಾರ ಪುನರಾರಂಭವಾಗಲಿದೆ ಎಂದು ಸಂಸದೆ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.

ಈ ಕುರಿತು ತಮ್ಮ ಕಚೇರಿಯಿಂದ ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿರುವ ಅವರು, ಜಿಲ್ಲೆಯಿಂದ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಏಕೈಕ ರೈಲು ಮತ್ತು ಚಿಕ್ಕಮಗಳೂರು-ಶಿವಮೊಗ್ಗ ರೈಲುಗಳ ಓಡಾಟದ ಮರು ಆರಂಭ ಹಾಗು ಇದಕ್ಕೆ ಪೂರಕವಾಗಿ ಚಿಕ್ಕಮಗಳೂರು ಕಡೂರು ಮಾರ್ಗದ ತಾತ್ಕಾಲಿಕ ಸ್ಥಗಿತಗೊಳ್ಳುವಿಕೆಯನ್ನೂ ತಕ್ಷಣವೇ ರದ್ದುಪಡಿಸಲು ಮಾಡಿದ ಪ್ರಯತ್ನ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಸಿ ತಾಣವೂ, ರಾಜ್ಯದ ಮಲೆನಾಡಿನ ಪ್ರಮುಖ ಜಿಲ್ಲೆಯೂ ಆದ ಚಿಕ್ಕಮಗಳೂರು ಕಾಫಿ ಮತ್ತು ಇತರ ಹಲವು ಕೃಷಿಗೆ ಹೆಸರುವಾಸಿಯಾಗಿದ್ದು ನಿತ್ಯ ಸಾವಿರಾರು ಜನರಿಗೆ ಪ್ರಯಾಣಕ್ಕೂ, ಕೃಷಿ ಸಂಬಂಧಿತ ಗೂಡ್ಸ್ ರೈಲುಗಳ ಓಡಾಟಕ್ಕೂ ಅನುಕೂಲಕರವಾಗುವಂತಹ ಮಾರ್ಗವಾಗಿದೆ ಎಂದು ರೈಲ್ವೇ ಸಚಿವರಿಗೆ ಹಾಗು ರೈಲ್ವೇ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆ ರೈಲ್ವೆ ಇಲಾಖೆ ಮನವಿಗೆ ಸ್ಪಂದಿಸಿದೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರು ಕಡೂರು ರೈಲು ಮಾರ್ಗವನ್ನು ಹಾಗು ರೈಲುಗಳನ್ನು ಲಾಭದಾಯಕವಾಗಿ ಜನಸ್ನೇಹಿಯಾಗಿ ಮಾಡಲು ಶೋಭಾ ಕರಂದ್ಲಾಜೆ ಹಲವಾರು ಸಲಹೆಗಳನ್ನು ರೈಲ್ವೇ ಸಚಿವರ ಜತೆ ಹಂಚಿಕೊಂಡಿದ್ದು , ಅದರಲ್ಲಿ, ಚಿಕ್ಕಮಗಳೂರು-ಬೆಂಗಳೂರು ನಡುವೆ ಹೊಸ ರಾತ್ರಿ ಸ್ಲೀಪರ್ ರೈಲು, ಹಗಲು ಹೊತ್ತಲ್ಲಿ ಬೆಂಗಳೂರು ಕಡೆ ಪ್ರಯಾಣಿಸುವವರಿಗೆ ಕಡೂರು, ಬೀರೂರಲ್ಲಿ ಸಂಪರ್ಕ ನೀಡುವ ಚಿಕ್ಕಮಗಳೂರು ಬಿರೂರು/ಕಡೂರು ಡೆಮು ಸೇವೆ, ಹಾಗು ಕೃಷಿ ಸಂಬಂದಿತ ಕಿಸಾನ್ ರೈಲುಗಳ ಓಡಾಟದ ಬಗ್ಗೆ ಇಲಾಖೆಯ ಜೊತೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದು, ಇದಕ್ಕೆ ಪೂರಕವಾಗಿ ಸ್ಪಂದಿಸಿದ ರೈಲ್ವೇ ಸಚಿವರು, ಸಮಯ ಬದಲಾವಣೆ, ಹೊಸ ರೈಲುಗಳ ಓಡಾಟದ ಬಗ್ಗೆ ಪರೀಶಿಲಿಸಿ ಪ್ರಸ್ತಾಪ ಸಲ್ಲಿಸುವಂತೆ ಅದಿಕಾರಿಗಳಿಗೆ ಸೂಚಿಸಿದರು ಎಂದು ಹೇಳಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!