May 6, 2024

MALNAD TV

HEART OF COFFEE CITY

“ಯಶಸ್ಸಿನತ್ತ ಹೆಜ್ಜೆ” ವಿಧ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗದರ್ಶಿ ಕಾರ್ಯಕ್ರಮ

1 min read

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿ ಜಿ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ “ಯಶಸ್ಸಿನತ್ತ ಹೆಜ್ಜೆ,” ವಿಧ್ಯಾರ್ಥಿ ಪರೀಕ್ಷಾ ಮಾರ್ಗದರ್ಶಿ ಕಾರ್ಯಕ್ರಮವನ್ನು ಆದಿ ಚುಂಚನಗಿರಿ ಶ್ರೀ ಮಠದ ಶೃಂಗೇರಿ ಶಾಖಾ ಮಠದ ಪೂಜ್ಯ ಗುಣನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ, ಮೈನಾ ಶೇಷಾದ್ರಿಯವರು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಯಶಸ್ಸನ್ನು ಪಡೆಯುವ ಕುರಿತು ಮಾರ್ಗದರ್ಶನ ನೀಡಿದರು. ಇದರೊಂದಿಗೆ ವಿದ್ಯಾರ್ಥಿಗಳಿಗೆ ಓದುವ ಹಾಗೂ ಭವಿಷ್ಯದ ಉದ್ಯೋಗ ಅವಕಾಶಗಳ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಜಿ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೇಶ್ ಎಂ ಆರ್ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ ಜಿ ಎಸ್ ವಿ ಎಸ್ ಶಾಲೆಯ ಉಪ ಪ್ರಾಂಶುಪಾಲರಾದ ಸ್ಮಿತಾ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ ಎಲ್ ಆರ್ ಜಿ ಪ್ರೌಡ ಶಾಲೆಯ ಪ್ರಾಂಶುಪಾಲರಾದ ಸುರೇಶ್ ಹಾಗೂ ಶಿಕ್ಷಕರಾದ ಸಾಗರ್ ಹಾಗೂ ಯೋಗೇಶ್ ಉಪಸ್ಥಿತರಿದ್ದರು. ಇದರೊಂದಿಗೆ ಕಾಲೇಜಿನ ಉಪನ್ಯಾಸ ವರ್ಗ ಹಾಗೂ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!