May 19, 2024

MALNAD TV

HEART OF COFFEE CITY

ಬೂತ್ ಹಂತದಲ್ಲಿ ಬಿಜೆಪಿ ಬಲವರ್ಧನೆ ಶ್ರಮಿಸಿ

1 min read

 

ಚಿಕ್ಕಮಗಳೂರು: ಮುಂದಿನ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪಕ್ಷವನ್ನು ಪ್ರತಿ ಬೂತ್ ಹಂತದಲ್ಲಿ ಪಕ್ಷ ಬಲಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಎಸ್‍ಸಿ ಮೋರ್ಚಾದ ಅಧ್ಯಕ್ಷ ಕೆ.ಪಿ.ವೆಂಕಟೇಶ್ ಕರೆ ನೀಡಿದರು.ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಎಸ್.ಸಿ ಮೋರ್ಚಾದ ನಗರ ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು ಕಾರ್ಯಕಾರಣಿ ಸಭೆಯ ಮುಖ್ಯ ಉದ್ದೇಶ ಪಕ್ಷದ ಬಲವರ್ಧನೆಗೆ ರೂಪುರೇಷೆಗಳನ್ನು ತಯಾರಿಸುವುದು ಜತೆಗೆ ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿರುವ ಬಗ್ಗೆ ಅವಲೋಕನ ಮಾಡಿಕೊಳ್ಳುವುದಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತಗೊಂಡು ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಬೇಕಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ದಲಿತರ ಏಳಿಗೆಗೆ ಹಲವು ಯೋಜನೆಗಳನ್ನು ರೂಪಿಸಿದ್ದು ಈ ಬಗ್ಗೆ ಜನರಿಗೆ ಮಾಹಿತಿ ನೀಡಿ ಪ್ರಚಾರಪಡಿಸಬೇಕು, ಮುಖ್ಯವಾಗಿ ನಗರಭಾಗದಲ್ಲಿ ಪಕ್ಷದ ಸಂಘಟನೆ ಕುಂಠಿತಗೊಂಡಿದ್ದು ವಿವಿಧ ಚಟುವಟಿಕೆಗಳ ಮೂಲಕ ಚುರುಕುಗೊಳಿಸಬೇಕು, ನಗರ ಮಂಡಲದ ವ್ಯಾಪ್ತಿಗೆ ಬರುವ ಎಲ್ಲಾ ಬೂತ್ ಹಾಗೂ ಮಹಾಶಕ್ತಿ ಕೇಂದ್ರಗಳಲ್ಲಿ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಪಕ್ಷವನ್ನು ಬಲವರ್ಧನೆಗೊಳಿಸುವಂತೆ ತಿಳಿಸಿದರು.
2023 ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಎಲ್ಲಡೆ ಪಕ್ಷ ಗಟ್ಟಿಗೊಳಿಸಬೇಕು ಎಂದರು.

ನಗರ ಮಂಡಲ ಪ್ರದಾನ ಕಾರ್ಯದರ್ಶಿ ಕೇಶವಮೂರ್ತಿ ಮಾತನಾಡಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಮೂಲಕ ದೇಶದ ಪ್ರಧಾನ ಮಂತ್ರಿಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.

ದೃಢ ಸಂಕಲ್ಪದದೊಂದಿಗೆ ನಗರ ಮಂಡಲ ಅಧ್ಯಕ್ಷ ನರಸಿಂಹಮೂರ್ತಿ ಅವರ ಮುಖಂಡತ್ವದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಕೆಲಸ ಮಾಡಬೇಕು, ಪಕ್ಷ ನೀಡಿದ ಜವಾಬ್ದಾರಿಯನ್ನು ಕಾರ್ಯಕರ್ತರು ಸಮರ್ಥವಾಗಿ ನಿಭಾಯಿಸಿ ಬಲವರ್ಧನೆಗೊಳಿಸುವಂತೆ ತಿಳಿಸಿದರು. ಇದೇ ವೇಳೆ ನಗರಸಭೆ ಸದಸ್ಯರಾದ ಸಿಎನ್ ಅರುಣ್‍ಕುಮಾರ್, ಲಲಿತಾ ರವಿನಾಯ್ಕ್, ಮಣಿಕಂಠ, ಪರಾಜಿತ ಅಭ್ಯರ್ಥಿಗಳಾದ ನರಸಿಂಹಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!