May 9, 2024

MALNAD TV

HEART OF COFFEE CITY

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ : ಹೆಚ್.ಡಿ ತಮ್ಮಯ್ಯ

1 min read

ಚಿಕ್ಕಮಗಳೂರು-ಕ್ಷೇತ್ರದಾದ್ಯಂತ ಗ್ರಾಮಗಳ ಅಭಿವೃದ್ಧಿಗೆ ನಾಗರೀಕರು ಹಾಗೂ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಬೇಧ, ಜಾತಿಭೇದ ಮಾಡದೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು.ಅವರು ಇಂದು ಕರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುವಂಗಿ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ವಿದ್ಯುತ್ ಸಮಸ್ಯೆ ರಾಜ್ಯಾದ್ಯಂತ ಇದೆ, ಕ್ಷೇತ್ರದಲ್ಲಿರುವ ವಿದ್ಯುತ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲಾಗುವುದು, ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಆದ್ಯತೆಗೆ ಗಮನ ನೀಡಿ ಇನ್ನೊಂದು ವಾರದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.    

         
ಗಾಳಿ ವಿದ್ಯುತ್ ಘಟಕದಿಂದ ವಿದ್ಯುತ್ ಉತ್ಪಾದನೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿರುವುದಕ್ಕೆ ಕಾರಣ ಅರಣ್ಯದ ತಪ್ಪಲಿನಲ್ಲಿ ಗಾಳಿ ತಗ್ಗಿರುವುದರಿಂದ ಉತ್ಪಾದನೆ ಸ್ಥಗಿತವಾಗಿದೆ. ಇನ್ನೊಂದು ವಾರದಲ್ಲಿ ಗಾಳಿ ಯಂತ್ರ ಸರಿಪಡಿಸಿ ಸುಧಾರಣೆ ಮಾಡುವುದಾಗಿ ಹೇಳಿದ ಅವರು ಕ್ಷೇತ್ರದಲ್ಲಿ ಜಾತ್ಯಾತೀತ, ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸ ಮಾಡಿ ಮಾದರಿ ಶಾಸಕನಾಗಲು ಇಚ್ಚಿಸುತ್ತೇನೆ ಎಂದರು.
ಈ ಭಾಗದ ಬಹಳ ದಿನಗಳ ಬೇಡಿಕೆಯಾಗಿದ್ದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಲಾಗಿದ್ದು ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚಿಸಲಾಗಿದೆ, ಗ್ಯಾರಂಟಿ ಯೋಜನೆಗಳು ಜಾರಿ ಮಾಡಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗಿದ್ದು ಮುಂದಿನ ದಿನಗಳಲ್ಲಿ ಅನುದಾನ ತಂದು ಕ್ಷೇತ್ರದಲ್ಲಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಬದ್ಧನಾಗಿದ್ದೇನೆ ಎಂದು ಹೇಳಿದರು.    

                     
  ಸಾರ್ವಜನಿಕರ ಬೇಡಿಕೆಗಳಿಗನುಸಾರವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ತಿಳಿಸಿದ ಅವರು ಕ್ಷೇತ್ರದಲ್ಲಿ ಅಜಾತಶತ್ರು ರಾಜಕಾರಣಿಯಾಗಿ ಕೆಲಸ ಮಾಡಲು ಬಯಸುತ್ತೇನೆ ಇದಕ್ಕೆ ಮಾಜಿ ಸಂಸದ ದಿವಂಗತ ಡಿ.ಸಿ ಶ್ರೀಕಂಠಪ್ಪ ನನಗೆ ಮಾದರಿ ಎಂದು ಸ್ಮರಿಸಿದರು.                              
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾಗುರುಸ್ವಾಮಿ ಮಾತನಾಡಿ ಈ ರಸ್ತೆ ಕಾಮಗಾರಿ ಕಳೆದ ಬಾರಿಯೇ ಆಗಬೇಕಿತ್ತು ಕಾರಣಾಂತರಗಳಿAದಾಗಿ ವಿಳಂಬವಾಗಿದ್ದು ಈಗ ಶಾಸಕ ಹೆಚ್.ಡಿ ತಮ್ಮಯ್ಯಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ, ಕಾಮಗಾರಿಯನ್ನು ಗುತ್ತಿಗೆದಾರರು ಶೀಘ್ರವಾಗಿ ಮುಕ್ತಾಯಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡುವಂತೆ ಕೋರಿದರು.               
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಪಾಪುರ ಮಂಜೇಗೌಡ, ಗ್ರಾ.ಪಂ ಸದಸ್ಯರುಗಳಾದ ಪುಟ್ಟಸ್ವಾಮಿಶೆಟ್ಟಿ, ಮೋಹನ್, ಶಂಕರ್, ನೇತ್ರಾವತಿ, ಮಂಜೇಗೌಡ ಗ್ರಾಮಸ್ಥರುಗಳಾದ ಭದ್ರೇಗೌಡ, ಕುಮಾರ್, ಸಿದ್ಧರಾಮು, ಯೋಗೀಶ್, ಜಗಧೀಶ್,ರಂಗನಾಥಶೆಟ್ರು, ನೀಲಶೆಟ್ರು, ನಾಗೇಶ್, ನೀಲಣ್ಣ, ರಂಗನಾಥ, ಈಶಣ್ಣ ಮತ್ತಿತರರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!