May 20, 2024

MALNAD TV

HEART OF COFFEE CITY

ನೂತನ ಬಸ್ ನಿಲ್ದಾಣಕ್ಕೆ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮನವಿ

1 min read

ಚಿಕ್ಕಮಗಳೂರು: ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮುಗುಳುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರನಹಳ್ಳಿಯಲ್ಲಿರುವ ವಿದ್ಯಾರ್ಥಿ ಪ್ಯಾರ ಮೆಡಿಕಲ್ ಕಾಲೇಜ್ ಬಳಿ ನೂತನ ಬಸ್ಟ್ಯಾಂಡ್ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಮುಗುಳುವಳ್ಳಿ ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ತಮ್ಮ ಸಮಸ್ಯೆ ಹೇಳಿಕೊಂಡ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆಯನ್ನು ಸರಿಪಡಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸರಿಯಾದ ಬಸ್ಟಾಂಡ್ ವ್ಯವಸ್ಥೆ ಇಲ್ಲ, ಸರಿಯಾದ ಸಮಯಕ್ಕೆ ಬಸ್ ಬರದ ಕಾರಣ ಕಾಲೇಜುಗಳಿಗೆ ನಿಗದಿತ ಸಮಯಕ್ಕೆ ತಲುಪಲು ಆಗುತ್ತಿಲ್ಲ, ಅಷ್ಟೇ ಅಲ್ಲದೆ ಕಂಡಕ್ಟರ್ ಗಳು ಕೂಡ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತಿಸುತ್ತಿದ್ದಾರೆ. ಈ ಸಂಬಂಧ ಈ ಹಿಂದೆಯೂ ಕೂಡ ಪತ್ರ ಬರೆದಿದ್ದೆವು ಆದರೂ ಏನು ಪ್ರಯೋಜನೆಯಾಗಿಲ್ಲ ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಮನವಿ ಮಾಡಿದರು. ಸಮಸ್ಯೆಗೆ ಸ್ಪಂಧಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|| ಗೋಪಾಲ ಕೃಷ್ಣ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!