May 20, 2024

MALNAD TV

HEART OF COFFEE CITY

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಬೇಕು – ಹೆಚ್.ಡಿ.ತಮ್ಮಯ್ಯ

1 min read

ಚಿಕ್ಕಮಗಳೂರು-ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲಿಯೂ ಸಹ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಕ್ರೀಡಾಪಟುಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.ಜೋಡಿಹೋಚಿಹಳ್ಳಿ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಜೋಡಿಲಿಂಗದಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಮನ್ವಯಾಧಿಕಾರಿಗಳ ಕಛೇರಿ ಬೀರೂರು ಇವರ ಸಂಯುಕ್ತಾಶ್ರಯದಡಿ ಜೋಡಿಹೋಚಿಹಳ್ಳಿ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆದ್ದವರು ಬೀಗದೆ, ಸೋತವರು ಬಾಗದೆ ಮುಂದಿನ ಕ್ರೀಡಾಕೂಟದಲ್ಲಿ ಗೆದ್ದೆ ಗೆಲ್ಲುತ್ತೇನೆ ಎಂಬ ಕ್ರೀಡಾ ಮನೋಭಾವನೆಯಿಂದ ಆಟವನ್ನು ಆಡಬೇಕು ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ತೀರ್ಪುಗಾರು ಪ್ರಾಮಾಣಿಕ ತೀರ್ಪನ್ನು ನೀಡಬೇಕು ಎಂದು ತಿಳಿಸಿದರು.

ನಾನು ಸಹ ೧ ರಿಂದ ೧೦ನೇ ತರಗತಿಯ ವರೆಗೆ ಸರ್ಕಾರಿ ಶಾಲೆಯಲ್ಲಿಯೇ ವ್ಯಾಸಂಗ ಮಾಡಿದ್ದು, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಕೀಳರಿಮೆ ತಿಳಿಯಬಾರದು, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಇಂದು ಉನ್ನತ ಹುದ್ಧೆಗಳನ್ನು ಅಲಂಕರಿಸಿದ್ದು, ಮೊರಾರ್ಜಿ ಶಾಲೆ ಪ್ರಾರಂಭ ಆದಾಗಿನಿಂದ ಯಾವುದೇ ಖಾಸಗಿ ವಸತಿ ಶಾಲೆಗಳಿಗೂ ಕಡಿಮೆ ಇಲ್ಲ ಎಂಬ ರೀತಿಯಲ್ಲಿ ಸರ್ಕಾರವು ನೋಡಿಕೊಳ್ಳಲಾಗುತ್ತಿದೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ, ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಶಿಕ್ಷಕರಿಗೆ ಅಭಿನಂದನೆಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷಿö್ಮÃದೇವಿಜಗನಾಥ್, ಪ್ರಾಂಶುಪಾಲರಾದ ರವಿ, ಮಂಜುನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ, ಕಡೂರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾ ಉಪಾಧ್ಯಕ್ಷ ಜಗಧೀಶ್, ಪ್ರಧಾನ ಕಾರ್ಯದರ್ಶಿ ಅಶೋಕ್, ಸಂಘಟನಾ ಕಾರ್ಯದರ್ಶಿ ಯಮುನಮೋಹನ್, ಗೀತಾಜ್ಞಾನಮೂರ್ತಿ, ಬಸಪ್ಪ, ಬೆನಕಪ್ಪ, ಮಾದಯ್ಯ, ಪರಮೇಶ್ವರಪ್ಪ, ಮುಳ್ಳಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಮಂಜುನಾಥ್ ಉಮಾಶಂಕರ್ ನಿರೂಪಿಸಿ ಮಂಜುನಾಥ್ ವಂದಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!