May 19, 2024

MALNAD TV

HEART OF COFFEE CITY

ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಮಾದರಿಯಾಗಬೇಕು – ಟಿ.ರಾಜಶೇಖರ್

1 min read

ಚಿಕ್ಕಮಗಳೂರು-ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತರುವುದರ ಜತೆಗೆ ಸಮಾಜಕ್ಕೆ ಮಾದರಿಯಾಗಿ ಬದುಕಬೇಕೆಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಟಿ.ರಾಜಶೇಖರ್ ತಿಳಿಸಿದರು.
 ನಗರದ ಜೆವಿಎಸ್ ಶಾಲೆ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಏರ್ಪಡಿಸಲಾಗಿದ್ದ ಶಾರದ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಅತಿ ಮುಖ್ಯ ಘಟ್ಟ, ಶ್ರಮಪಟ್ಟು ವಿದ್ಯಾಭ್ಯಾಸ ಮಾಡಿದಾಗ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದರು.
ಜೆವಿಎಸ್ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ, ನಮ್ಮ ಶಾಲೆಯಲ್ಲಿ ನುರಿತ ಶಿಕ್ಷಕರು ಪಾಠ ಮಾಡುವುದರ ಜತೆಗೆ ಮಕ್ಕಳನ್ನು ಉತ್ತಮ ರೀತಿಯಲ್ಲಿ ತಯಾರು ಮಾಡಿದ್ದಾರೆ, ವಿದ್ಯಾರ್ಥಿಗಳು ಪರೀಕ್ಷೆಗೆ ಗಾಬರಿಪಡದೆ, ಪರೀಕ್ಷೆ ಬರೆಯಬೇಕು ಎಂದರು.

ಎಸ್.ಎಸ್.ಎಲ್.ಸಿ.ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಯಾವ ವಿದ್ಯಾರ್ಥಿಗಳು ಸಹ ನಿರಾಶರಾಗದೆ ನಿಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ, ಇಂದು ಖ್ಯಾತ ಉದ್ಯಮಿಗಳೆಲ್ಲ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಬಿಟ್ಟು ಉದ್ಯಮಿಗಳಾಗಿ ಸಮಾಜಕ್ಕೆ ಮಾದರಿಯಾಗಿದ್ದಾರೆ, ವಿದ್ಯಾಬ್ಯಾಸ ನಮ್ಮ ಜೀವನಕ್ಕೆ ಅಗತ್ಯ ಇಂದು ಶ್ರಮ ಪಟ್ಟು ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿ ಕೆಲಸ ಮಾಡುತ್ತಾರೆ ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ಅಸಾಧರಣ ಪ್ರತಿಭೆಯಾದ ೮ನೇ ತರಗತಿಯ ಧನ್ಯತಾಳಿಗೆ ಮತ್ತು ಪ್ರಬಂದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹತ್ತನೇ ತರಗತಿ ಲಿಖತ್ ಅವರಿಗೆ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಸಿ.ಪ್ರಕಾಶ್, ಶಾಲಾ ಸಹಕಾರ್ಯದರ್ಶಿ ಮನುಕುಮಾರ್, ಸಿಇಓ ಕುಳ್ಳೇಗೌಡ, ಮುಖ್ಯ ಶಿಕ್ಷಕ ವಿಜಿತ್, ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!