April 30, 2024

MALNAD TV

HEART OF COFFEE CITY

ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

1 min read

 

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಯಾಗಿ ಕೆ. ಜಯಪ್ರಕಾಶ್ ಹೆಗ್ಡೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಮಣಿಪಾಲದಲ್ಲಿ ಕಾರ್ಯಕರ್ತರ ಬೃಹತ್ ರೋಡ್ ಶೋ ಮೂಲಕ ಆಗಮಿಸಿದರು. ಜಯಪ್ರಕಾಶ್ ಹೆಗ್ಡೆ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಪಕ್ಷದ ಜಿಲ್ಲಾಧ್ಯಕ್ಷ ಅಂಶುಮಂತ್ ಮೋಟಮ್ಮ ಸಾಥ್ ನೀಡಿದರು.

 

ಇನ್ನು ಬಿಜೆಪಿ ವತಿಯಿಂದ ಕೋಟಾ ಶ್ರೀನಿವಾಸ ಪೂಜಾರಿ ಕೂಡಾ ಮೆರವಣಿಗೆಯಲ್ಲಿ ಆಗಮಿಸಿ ರಜತಾದ್ರಿ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಕೋಟಾ ಅವರಿಗೆ ಸಿ.ಟಿ ರವಿ , ಜೆಡಿಎಸ್ ಎಂಎಲ್.ಸಿ ಭೋಜೇಗೌಡ , ಯಶ್ಪಾಲ್ ಸುವರ್ಣ , ಗುರ್ಮೆ ಸುರೇಶ್ ಹಾಜರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!