April 30, 2024

MALNAD TV

HEART OF COFFEE CITY

ಚಿಕ್ಕಮಗಳೂರು ಪ್ರೆಸ್ ಕ್ಲಬ್ ನಿಂದ ಯಶಸ್ವಿ ಉಡುಪಿ ಚಲೋ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾಧಿಕಾರಿ ಭೇಟಿ

1 min read

ಇದೇ ಮೊದಲ ಬಾರಿಗೆ ಚಿಕ್ಕಮಗಳೂರು ಪ್ರೆಸ್ ಕ್ಲಬ್ ವಿಭಿನ್ನ ಚಟುವಟಿಕೆ ಕಾರಣವಾಗಿದೆ. ಪುನರ್ ವಿಂಗಡಣೆ ನಂತರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವಾದ ನಂತರ ಉಡುಪಿ ಜಿಲ್ಲಾಧಿಕಾರಿಯವರೇ ಚುನಾವಣಾಧಿಕಾರಿ ಆದ ನಂತರ ನಾಮಪತ್ರ ಸಲ್ಲಿಕೆ ಹಾಗೂ ಮತ ಎಣಿಕೆ ಕೂಡಾ ನಡೆಯುವ ಉಡುಪಿ ಡಿ.ಸಿ ಕಚೇರಿಗೆ ಪ್ರೆಸ್ ಕ್ಲಬ್ ಪ್ರವಾಸ ಕೈಗೊಂಡು ಚುನಾವಣಾಧಿಕಾರಿ ಯಾದ ಡಾ. ಕೆ ವಿದ್ಯಾಕುಮಾರಿ ಯವರನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ರಾಜೇಶ್ ನೇತೃತ್ವದಲ್ಲಿ ಪತ್ರಕರ್ತರು ಚುನಾವಣೆ ತಯಾರಿ ಬಗ್ಗೆ ಪ್ರಶ್ನೆ ಕೇಳಿ ಉತ್ತರ ಪಡೆದರು. ಈ ವೇಳೆ ಉತ್ತರಿಸಿದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಏಪ್ರಿಲ್ 8 ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿವನಾಗಿದ್ದು ನಂತರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳಿಗೆ ಚಿಹ್ನೆ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದರು. ಅಲ್ಲದೇ ಏಪ್ರಿಲ್ 13 ರಿಂದ 18 ರವರೆಗೂ ಹೋಂ ವೋಟಿಂಗ್ ನಡೆಯಲಿದ್ದು 85 ವರ್ಷ ವಯಸ್ಸಾದ ಹಾಗೂ ವಿಶೇಷ ಚೇತನರು ಮನೆಯಿಂದಲೇ ಮತದಾನ ಮಾಡಬಹುದು ಎಂದರು. ಎರಡೂ ಜಿಲ್ಲೆಗಳಲ್ಲಿ ಸ್ವೀಪ್ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಿತ್ತಿದ್ದು ಮತದಾನ ಪ್ರಮಾಣ ಹೆಚ್ಚಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು. ಅಲ್ಲದೇ ಉಡುಪಿ ಚಿಕ್ಕಮಗಳೂರು ಎರಡೂ ಜಿಲ್ಲೆಗಳ ಉತ್ತಮ ಭಾಂದವ್ಯ ಸಮನ್ವಯದಿಂದ ಪ್ರಜಾಪ್ರಭುತ್ವ ಹಬ್ಬ ಯಶಸ್ವಿಗೊಳಿಸಲಾಗುವುದು ಎಂದರು. ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಜರಿದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!